ಭ್ರಷ್ಟ ಬಿ.ಜೆ.ಪಿ. ತೊಲಗಿಸಿ, ಕಾಂಗ್ರೆಸ್ ಪಕ್ಷ ಗೆಲ್ಲಿಸಿ: ಜನ ಸಂಪರ್ಕ ಅಭಿಯಾನ

3 years ago

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಇಂದಿರಾನಗರದ ಮಸೀದಿ ಮುಂಭಾಗ ಅಲ್ಪಸಂಖ್ಯಾತ ಮುಖಂಡರ ಜೊತೆಯಲ್ಲಿ ಕೆ.ಪಿ.ಸಿ.ಸಿ. ಸಂಯೋಜಕರಾದ ಸುದರ್ಶನ್ ರವರು ಭೇಟಿ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸುದರ್ಶನ್, ಕಾಂಗ್ರೆಸ್ ಪಕ್ಷ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಕಾಯಕ ಸಿದ್ಧಾಂತ ಮಾರ್ಗದಲ್ಲಿ ನಡೆಯುತ್ತಿರುವ ಪಕ್ಷ. ಜಾತ್ಯತೀತ ಸಿದ್ಧಾಂತದಂತೆ ಎಲ್ಲರು ಒಂದೇ ಸಹೋದರತ್ವದಲ್ಲಿ ಜೀವನ ಸಾಗಿಸಬೇಕು. ಭಾರತ ದೇಶ ಜಾತ್ಯತೀತ ರಾಷ್ಟ್ರ ಎಂದರು.

ಇಂದು ದೇಶದಲ್ಲಿ ಅಸಮಾನತೆ, ಅಶಾಂತಿ, ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯದ ಬಿ.ಜೆ.ಪಿ. ಸರ್ಕಾರ 40% ಪರ್ಸೆಂಟ್ ಸರ್ಕಾರ ಎಂದು ಜನ ಮಾತನಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಕೊವಿಡ್ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಎಸಗಲಾಗಿದೆ. ಬೆಂಗಳೂರು ನಗರ ಗುಂಡಿಗಳ ನಗರವಾಗಿದೆ. ಪ್ರತಿಯೊಂದು ಕಾಮಗಾರಿಗಳ ಲಂಚಾವತಾರ ಹೆಚ್ಚಾಗಿ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಆಡಳಿತ ಅವಧಿಯಲ್ಲಿ ಎಲ್ಲ ಧರ್ಮ, ವರ್ಗದವರಿಗೆ ಸರ್ಕಾರದ ಯೋಜನೆಗಳನ್ನು ರೂಪಿಸಿ, ಸಾಮಾಜಿಕ ಬದಲಾವಣೆ ತಂದರು. ಎ.ಐ.ಸಿ.ಸಿ. ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಆಡಳಿತಪಕ್ಷವಾಗಿ ಹೊರಹೊಮ್ಮಲಿದೆ. ರಾಜ್ಯದ ಜನತೆ ಆಶೀರ್ವಾದ ಮಾಡಬೇಕು ಎಂದರು.

ಈ ಬಾರಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ನಾನು ಸಹ ಅಕಾಂಕ್ಷಿಯಾಗಿದ್ದೇನೆ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು.

ಶಂಶೀರ್ ಬೇಗ್, ಮಹೇಶ್, ಜ್ಞಾನೇಶ್, ಅಲ್ಪಸಂಖ್ಯಾತ ಧರ್ಮಗುರುಗಳು, ಮುಖಂಡರು ಭಾಗವಹಿಸಿದ್ದರು.

Leave a Reply