ಲಕ್ಷ್ಮಿ ‌ಹೆಬ್ಬಾಳ್ಕರ್ ವಿರುದ್ಧ ಭ್ರಷ್ಟಾಚಾರ ಆರೋಪ

2 years ago

#Corruption #charges #against #LakshmiHebbalkar #Lokayukta

ಬೆಂಗಳೂರು: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ‌ಹೆಬ್ಬಾಳ್ಕರ್ ವಿರುದ್ಧ ಭ್ರಷ್ಟಾಚಾರ ಆರೋಪದ ದೂರನ್ನು ಲೋಕಾಯುಕ್ತದಲ್ಲಿ ಸಲ್ಲಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಹಾರ ಪೂರೈಕೆಯ ಟೆಂಡರ್ ಪ್ರಕ್ರಿಯೆಯಲ್ಲಿ ಸು. 600 ಕೋಟಿ ರೂ.ಗಿಂತಲೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿ ವಕೀಲ ನಟರಾಜ್ ಶರ್ಮಾ  ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ಸರಬರಾಜಿನಲ್ಲಿ ಅವ್ಯವಹಾರ ನಡೆದಿದೆ. ಅನರ್ಹಗೊಂಡಿರುವ ಸಹಕಾರ ಸಂಸ್ಥೆಗಳಿಗೆ ಪೌಷ್ಠಿಕ ಆಹಾರ ಪೂರೈಕೆ ಮಾಡುವ ಟೆಂಡರ್ ನೀಡಿದ್ದಾರೆ. ಬ್ಲಾಕ್ ಲೀಸ್ಟ್ ನಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಮ್ ಕಂಪನಿ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಇಲಾಖೆ ಅಧಿಕಾರಿಗಳು ಶಾಮೀಲಾಗಿ ಈ ಟೆಂಡರ್ ನೀಡಿದ್ದಾರೆ ಎಂದು  ದೂರಿನಲ್ಲಿ ಆರೋಪಿಸಲಾಗಿದೆ.

ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರದ ಗುಣಮಟ್ಟದ ಕುರಿತು ಹೈಕೋರ್ಟ್ ನೀಡಿದ್ದ ಆದೇಶ  ಉಲ್ಲಂಘನೆ ಮಾಡಲಾಗಿದೆ. ಬ್ಲಾಕ್‌ ಲಿಸ್ಟ್‌ನಲ್ಲಿರುವ ಕಂಪನಿಗೆ ಆಹಾರ ಪೂರೈಕೆ ಮಾಡಲು ಟೆಂಡರ್ ನೀಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ಸಿ ಪ್ರಕಾಶ್ ಹಾಗೂ ನಿರ್ದೇಶಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಅಕ್ರಮವಾಗಿ ಟೆಂಡರ್ ನೀಡುವ ಮೂಲಕ ಕಂಪನಿಗಳಿಂದ ಲಕ್ಷ್ಮಿ ಹೆಬ್ಬಾಳ್ಕರ್ ಶೇ.10 ರಷ್ಟು ಕಮಿಷನ್ ಸಹ ಪಡೆದಿದ್ದಾರೆ ಎಂಬುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.

ಪೌಷ್ಟಿಕ ಆಹಾರ ಪೂರೈಸುವ ಸಂಸ್ಥೆ ಟೆಂಡರ್ ಪಡೆಯಲು ನೀಡಿರುವ ವಿಳಾಸದ ಕಂಪನಿಯೇ ಬೆಂಗಳೂರಿನಲ್ಲಿ ಇಲ್ಲ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರವಾಗಿ ಸ್ಥಳೀಯ ಸಂಸ್ಥೆಗಳಿಗೆ ಟೆಂಡರ್ ನೀಡಬೇಕು ಎಂದು ಕೋರ್ಟ್ ಹೇಳಿದೆ. ಈ ನಿಯಮ ಕೂಡ ಉಲ್ಲಂಘನೆಯಾಗಿದೆ. 2011ರಲ್ಲಿ ಕ್ರಿಸ್ಟಿಫ್ರೈಡ್ ಕಂಪನಿಯಿಂದ ಅಂಗನವಾಡಿಗಳಿಗೆ ಆಹಾರ ಪೂರೈಕೆ ಮಾಡಲಾಗುತ್ತಿತ್ತು. ಆದ್ರೆ ಗುಣಮಟ್ಟ ಕಡಿಮೆಯಿದ್ದ ಕಾರಣ ಈ ಕಂಪನಿಯನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲಾಯಿತು. ಆದರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕ್ರಿಸ್ಟಿ ಪ್ರೈಡ್ ಕಂಪನಿಗಳ ಅಧೀನದಲ್ಲಿ ಬರುವ ಮೂರು ಕಂಪನಿಗಳಿಗೆ ಟೆಂಡರ್ ನೀಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

Leave a Reply