ಬಳ್ಳಾರಿ: ಪ್ರಸ್ತಕ ಸಾಲಿನ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 12 ರಂದು ಕೌನ್ಸಿಲಿಂಗ್ ಪ್ರಕ್ರಿಯೆ ಏರ್ಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ನಗರದ ಹೊಸಪೇಟೆ ರಸ್ತೆಯ ಅಲ್ಲಿಪುರದ ಬಿಎಟಿಎಂ ಕಾಲೇಜು ಬಳಿಯ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಜೂ.12 ರಂದು ಬೆಳಿಗ್ಗೆ 10.30 ಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮೂಲಕ ಪ್ರವೇಶದ ಸೀಟ್‍ನ್ನು (ವಸತಿ ಶಾಲೆಯನ್ನು) ಆಯ್ಕೆ ಮಾಡಿಕೊಳ್ಳಬಹುದಾಗಿದೆ.
ಕೌನ್ಸಿಲಿಂಗ್ ಹಾಜರಾಗುವ ವಿದ್ಯಾರ್ಥಿಗಳು ತಪ್ಪದೇ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸಬೇಕು. 5 ಫೋಟೋ, ಹಾಲ್ ಟಿಕೆಟ್ (ಪ್ರವೇಶ ಪತ್ರ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‍ಕಾರ್ಡ್, ವಿಶೇಷ ಕೋಟದಲ್ಲಿ ಆಯ್ಕೆಯಾದ ಪ್ರಮಾಣ ಪತ್ರ, 5ನೇ ತರಗತಿ ಅಂಕಪಟ್ಟಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ದ್ವಿ ಪ್ರತಿಯಲ್ಲಿ ಝೆರಾಕ್ಸ್ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ) ಪ್ರಾಂಶುಪಾಲರ ಮೊ.7353346069, ಸಂಡೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9480933730, ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9113280239 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




