ಎಣಿಕೆ ಕೇಂದ್ರಕ್ಕೆ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಭೇಟಿ: ಸಿದ್ಧತೆಗಳ ಪರಿಶೀಲನೆ
ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ ಮತಗಳ ಎಣಿಕೆ ಕಾರ್ಯ ನ.23 ರಂದು ಬೆಳಿಗ್ಗೆ 08 ಗಂಟೆಯಿಂದ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರುಗಲಿದ್ದು, ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ, ಸಿದ್ಧತೆಗಳ ಕುರಿತು ಪರಿಶೀಲಿಸಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ನ.23 ರಂದು ಬೆಳಿಗ್ಗೆ 08 ಗಂಟೆಗೆ ಮತ ಎಣಿಕಾ ಕಾರ್ಯ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಸ್ಟ್ರಾಂಗ್ ರೂಂಗಳನ್ನು ತೆರೆಯುವುದು, ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳುವುದು, ಮತ ಎಣಿಕಾ ಕಾರ್ಯ ನೆರವೇರಿಸುವ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಮತ್ತು ಏಜೆಂಟರುಗಳ ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈಗಾಗಲೇ ಮತ ಎಣಿಕಾ ಕೊಠಡಿಗಳನ್ನು ಅಗತ್ಯ ಬ್ಯಾರಿಕೇಡ್, ಎಣಿಕಾ ಟೇಬಲ್‌ಗಳ ವ್ಯವಸ್ಥೆ, ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸುವ ದ್ವಾರದಲ್ಲಿ ಭದ್ರತೆ ಮುಂತಾದ ಕಾರ್ಯಗಳ ಬಗ್ಗೆಯೂ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಜರಿದ್ದರು.




