ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ಗೆ ಶಸ್ತ್ರಚಿಕಿತ್ಸೆ ನಡೆಸುವ ಅಗತ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ನೆರವಿನ ಆಧಾರದ ಮಧ್ಯಂತರ ಜಾಮೀನು ಅರ್ಜಿ ಮೇಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದ್ದು ನಾಳೆ ತೀರ್ಪು ಪ್ರಕಟಿಸಲಿದೆ.
ಸದ್ಯ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
- ಶ್ರೀರಾಮ ದೇಗುಲದಲಿ ಕಳ್ಳತನ, ಚಾನ್ಸೇ ಇಲ್ಲ!!!
- ದೇವರ ಮುಂದೆ ಎಲ್ಲರೂ ಸಮಾನರು: ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ
- ಯಡಿಯೂರಿನಲ್ಲಿ ಅ.ನ.ಕೃ ಕನ್ವೆನ್ಷನ್ ಸೆಂಟರ್, ಡಾ. ಪುನೀತ್ ರಾಜ್ಕುಮಾರ್ ಸಭಾಂಗಣ ಲೋಕಾರ್ಪಣೆ
- ಬಿಜೆಪಿಯವರು ಧರ್ಮಸ್ಥಳವನ್ನು ತಮ್ಮ ರಾಜಕಾರಣಕ್ಕೆ ಬಳಸಬಾರದು
- ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಧಿಕಾರ ಅಲ್ಲ ಜವಾಬ್ದಾರಿ: ಬಿ ಕೆ ಹರಿಪ್ರಸಾದ್
ವಿಚಾರಣೆ ವೇಳೆ ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ದರ್ಶನ್ ಕಳೆದ ಎರಡು ವರ್ಷಷಗಳಿಂದ ಬೆನ್ನುಹುರಿ ಸಮಸ್ಯೆ ಎದುರಿಸುತ್ತಿದ್ದಾರೆ. ಅದೀಗ ಉಲ್ಬಣಗೊಂಡಿದೆ. ತುರ್ತಾಗಿ ಶಸ್ತ್ರಚಿಕಿತ್ಸೆ ನಡೆಸದೇ ಹೋದರೆ ಕಿಡ್ನಿ ತೊಂದರೆ ಕಾಣಿಸಿಕೊಳ್ಳಬಹುದು ಅಥವಾ ಪಾರ್ಶ್ವವಾಯುವಿಗೆ (ಲಕ್ವ) ತುತ್ತಾಗುವ ಅಪಾಯವಿರುತ್ತದೆ. ಹಾಗಾಗಿ, ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಇದಕ್ಕೆ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅರ್ಜಿದಾರರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತೇನೆ ಎಂದು ಹೇಳುತ್ತಿರುವುದು ಸಮಂಜಸವಾಗಿಲ್ಲ. ಬದಲಿಗೆ ಅಧಿಕೃತವಾದ ವಿಸ್ತೃತ ವೈದ್ಯಕೀಯ ಮಂಡಳಿ ಶಿಫಾರಸು ಆಧರಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿತು.




