ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮ ಅವರ ಹೇಳಿಕೆ ದಾಖಲಿಸಿಕೊಂಡಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಪ್ರಕರಣದ ಎರಡನೇ ಆರೋಪಿಯಾಗಿರುವ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ವಿಚಾರಣೆಗೆ ಹಾಜರಾದ ಪಾರ್ವತಮ್ಮ ಲೋಕಿಯುಕ್ತರ ಹಲವು ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಈ ಹೇಳಿಕೆಯನ್ನು ದಾಖಲಿಸಿಕೊಂಡು ಕಡತಗಳೊಂದಿಗೆ ಪರಿಶೀಲನೆ ಮಾಡುತ್ತಿರುವ ಲೋಕಾಯುಕ್ತ ಪೊಲೀಸರು ಇದೀಗ ಸಿದ್ದರಾಮಯ್ಯ ಅವರಿಗೂ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲನೇ ಆರೋಪಿಯಾಗಿದ್ದು, ಅವರನ್ನುವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ.
ಪ್ರಕರಣದ ಎರಡನೇ ಆರೋಪಿಯಾಗಿರುವ ಪಾರ್ವತಮ್ಮ, ಮೂರನೇ ಆರೋಪಿಯಾಗಿರುವ ಮಲ್ಲಿಕಾರ್ಜುನ ಸ್ವಾಮಿ ಮತ್ತು ನಾಲ್ಕನೇ ಆರೋಪಿಯಾದ ದೇವರಾಜು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಈಗ ಬಾಕಿ ಇರುವುದು ಮೊದಲ ಆರೋಪಿ ವಿಚಾರಣೆ ಮಾತ್ರ. ಅಂದರೆ ಮೊದಲ ಆರೋಪಿಯಾದ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಲು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಿದ್ದಾರೆ.
ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸುವುದು ಇಲ್ಲವೇ, ಬಂಧಿಸುವುದು ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೇಳಿತ್ತು. ಸಿದ್ದರಾಮಯ್ಯ ಅವರ ಮೇಲೆ ಆರೋಪ ಕೇಳಿ ಬಂದ ಕಾರಣ ವಿಚಾರಣೆಗೆ ಎದುರಾಗುವುದು ಅನಿವಾರ್ಯವಾಗಿದೆ.




