ಬೆಂಗಳೂರು: ಕಲಬುರಗಿಯಿಂದ ಉದ್ಯೋಗ ಅರಸಿ ಬಂದು ರಾಜಾನುಕುಂಟೆಯ ಸಿಂಗನಾಯ್ಕನಹಳ್ಳಿಯ ಬಳಿ ವಾಸಿಸುತ್ತಿದ್ದ ಕ್ಯಾಬ್ ಚಾಲಕನೊಬ್ಬ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ಕೊಲೆಗೈದು ಪತ್ನಿ ಜೊತೆ ಸೇರಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕ್ಯಾಬ್ ಚಾಲಕ ಅವಿನಾಶ್ (38), ಪತ್ನಿ ಮಮತಾ (30) ಹಾಗೂ ಮಗಳಾದ ಅಧೀರ್ (5) ಮತ್ತು ಅಣ್ಣಯ್ಯ (2.5)ನಿಗೆ ವಿಷ ಉಣಿಸಿ ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೊದಲಿಗೆ ಮಕ್ಕಳನ್ನು ಕೊಂದು ಆ ಬಳಿಕ ಪತಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಅವಿನಾಶ್ ಕಲಬುರಗಿ ಮೂಲದವರಾಗಿದ್ದು, ಕೆಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಇಲ್ಲಿ ಕ್ಯಾಬ್ ಚಾಲಕ ನಾಗಿ ಕೆಲಸ ಮಾಡುತ್ತಿದ್ದ. ರಾಜಾನುಕುಂಟೆ ಬಳಿಯ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದ ನರಸಪ್ಪ ಎನ್ನುವವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ಆದರೆ, ಇಂದು ಬೆಳಗ್ಗೆ ಎಷ್ಟೇ ಹೊತ್ತಾದರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಮನೆ ಮಾಲೀಕರು ಕಿಟಕಿಯಿಂದ ನೋಡಿದಾಗ ಪತಿ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಡಲೇ ಚಾಲಕನ ಸಹೋದರನಿಗೆ ಮಾಹಿತಿ ನೀಡಲಾಗಿದೆ.
ಸ್ಥಳಕ್ಕೆ ಬಂದ ಅವಿನಾಶ್ನ ಸಹೋದರ ಉದಯ್ ಮನೆಯಲ್ಲಿ ಎಲ್ಲರೂ ಮೃತಪಟ್ಟಿರುವುದನ್ನು ನೋಡಿ ಶಾಕ್ ಆಗಿದ್ದಾರೆ. ಕುಟುಂಬದವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ಕೂಡಲೇ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ, ಕಲಬುರಗಿ ಮೂಲದ ವ್ಯಕ್ತಿ ಕಳೆದ 5 ರಿಂದ 6 ವರ್ಷಗಳ ಹಿಂದೆ ನಗರಕ್ಕೆ ಬಂದು ವಾಸವಾಗಿದ್ದರು. ವೃತ್ತಿಯಲ್ಲಿ ಓಲಾ, ಉಬರ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಸಹೋದರ ಬಂದು ಅಣ್ಣ ಫೋನ್ ತೆಗೆಯುತ್ತಿಲ್ಲ ಎಂದು ಬಾಗಿಲು ತೆರೆದಾಗ ಅಣ್ಣ ನೇಣಿಗೆ ಶರಣಾಗಿದ್ದು, ಇನ್ನು ಅತ್ತಿಗೆ ಮತ್ತು ಮಕ್ಕಳನ್ನು ಎಬ್ಬಿಸಲು ಮುಂದಾದಾಗ ಅವರೂ ಕೂಡ ಮೃತಪಟ್ಟಿರುವುದು ಗೊತ್ತಾಗಿದೆ ಎಂದರು.
ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ನಾವು ಬಂದು ಸ್ಥಳ ಪರಿಶೀಲನೆ ಮಾಡಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಇನ್ನು ಆತ್ಮಹತ್ಯೆ ಮತ್ತು ಹೆಂಡತಿ, ಮಕ್ಕಳ ಕೊಲೆ ಬಗ್ಗೆ ಎರಡು ಪ್ರಕರಣ ದಾಖಲಿಸಿ ಸಂಬಂಧಿಕರಿಂದ ಮಾಹಿತಿ ಕಲೆ ಹಾಕಿ ಹೆಚ್ಚಿನ ತನಿಖೆ ಮಾಡಲಾಗುತ್ತದೆ ಎಂದರು.




