ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕಾಣಿಸಿಕೊಂಡಿರುವ ಕೋವಿಡ್ ಸೋಂಕಿನ ಉಪತಳಿ ಅಷ್ಟೇನೂ ಅಪಾಯಕಾರಿಯಲ್ಲ. ಹೀಗಾಗಿ ಜನ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದೆ. ಅದೇ ರೀತಿ ನಗರ ಪ್ರದೇಶಗಳಲ್ಲಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿಮುಂದಿನ ಮೂರಾಲ್ಕು ದಿನಗಳ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ಕೋವಿಡ್ ಜೆ-1 ಉಪತಳಿಯಿಂದ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿಗಳು ಎಲ್ಲೂ ವರದಿಯಾಗಿಲ್ಲ. ಯಾರೂ ಗಂಭೀರ ಪರಿಸ್ಥಿತಿಗೆ ಹೋಗಿರುವ ಉದಾಹರಣೆಗಳಿಲ್ಲ. ಸಿಂಗಾಪುರ ಹಾಗೂ ಇತರ ದೇಶಗಳಲ್ಲಿ ಕೋವಿಡ್ ಹಬ್ಬಿದೆ.ಆದರೆ, ಅದರಿಂದ ಆತಂಕದ ವಾತಾವರಣವಿಲ್ಲ. ಪ್ರವಾಸ ಮಾಡಬಾರದು ಎಂದು ಯಾರೂ ನಿರ್ಬಂಧ ಹೇರಿಲ್ಲ. ಮೊದಲ ಮತ್ತು ಎರಡನೇ ಹಂತದ ಕೋವಿಡ್ ಪರಿಸ್ಥಿತಿ ಈಗಿಲ್ಲ. ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವಿರುತ್ತೇವೆ ಎಂದರು.
ಕೇಂದ್ರ ಸರ್ಕಾರ ರಾಜ್ಯದ ಆರೋಗ್ಯ ಇಲಾಖಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸದ್ಯಕ್ಕೆ ನೀಡಿರುವ ಮಾರ್ಗಸೂಚಿಗಳೇ ಸಾಕು. ವಿಶೇಷ ಕ್ರಮಗಳ ಅಗತ್ಯ ಇಲ್ಲ. ಜನ ವಿಶೇಷ ನಿಗಾ ವಹಿಸುವ ರಿಸ್ಕ್ ಕೆಟಗರಿಯವರು ಮಾಸ್ಕ್ ಧರಿಸಿ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ವೃದ್ಧರು ಮತ್ತು ಆರೋಗ್ಯ ಸಮಸ್ಯೆ ಇರುವವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಲಾಗಿದೆ. ವಯೋವೃದ್ಧರಿಗೆ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದರು.
ಮುಂದಿನ 2-3 ದಿನ ದೇಶ ಹಾಗೂ ರಾಜ್ಯದಲ್ಲಿ ಸೋಂಕಿನ ಹರಡುವಿಕೆಯ ಬಗ್ಗೆ ನಿಗಾ ವಹಿಸಲಾಗಿದೆ. ಕೋವಿಡ್ ನಿಯಂತ್ರಣ ಸಲಹಾ ಸಮಿತಿ ಪ್ರತಿವಾರ ಸಭೆ ಸೇರಿ ಚರ್ಚೆ ನಡೆಸುವಂತೆ ಸೂಚಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಮೂರಾಲ್ಕು ದಿನ ಪರಿಶೀಲಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಯಾವುದೇ ಆತಂಕದ ವಾತಾವರಣವಿಲ್ಲ ಎಂದರು.
ಸೋಂಕಿನಿಂದ ಒಬ್ಬರು ಮೃತಪಟ್ಟಿರುವುದು ಖಚಿತವಾಗಿದೆ. ಅವರಿಗೆ 84 ವರ್ಷವಾಗಿತ್ತು. ಒಂದು ವರ್ಷದಿಂದ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಹಿಪ್ ರಿಪ್ಲೇಸ್ಮೆಂಟ್, ಹೃದ್ರೋಗ, ಕ್ಷಯ ರೋಗವೂ ಇತ್ತು. ನಾನಾ ಆರೋಗ್ಯ ಸಮಸ್ಯೆಗಳಿದ್ದವು. ಕೋವಿಡ್ ಸೋಂಕಿನಿಂದಲೇ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಆಡಿಟ್ ನಡೆಸಲು ಸೂಚಿಸಲಾಗಿದೆ ಎಂದರು.




