ಬಳ್ಳಾರಿ: ಪಾರದರ್ಶಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆಯ ಮಾಹಿತಿ, ಸಹಾಯವಾಣಿ ಹಾಗೂ ಕುಂದುಕೊರತೆಗಳ ಬಗ್ಗೆ ಶಾಲೆ-ಕಾಲೇಜುಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಚುನಾವಣಾ ಆ್ಯಪ್ಗೆಳಾದ ವಿ.ಹೆಚ್.ಎ, ಸಕ್ಷಮ್, ಸುವಿಧಾ, ಸಿ-ವಿಜಿಲ್ ಮತ್ತು 1950 ಸಹಾಯವಾಣಿ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎಸ್.ವಸ್ತ್ರದ್ ಸೂಚಿಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಬಳ್ಳಾರಿ ನಗರದಲ್ಲಿ ಕಡಿಮೆ ಮತದಾನ ಕೇಂದ್ರಗಳ ಬಿ.ಎಲ್.ಓ ಮೇಲ್ವಿಚಾರಕರು, ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ತರಬೇತುದಾರರೊಂದಿಗೆ ಜಿಲ್ಲಾ ಪಂಚಾಯತ್ನ. ನಜೀರ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕಡಿಮೆ ಮತದಾನ ಕೇಂದ್ರಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ಮತದಾರರ ಜಾಗೃತಿ ನಮೂನೆಗಳ ಮೂಲಕ ವಿಶೇಷವಾದ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಮತದಾನ ಕೇಂದ್ರಗಳಲ್ಲಿನ ಮೂಲ ಸೌಕರ್ಯಗಳ ಕುರಿತು ವಿಶೇಷ ಗಮನ ಹರಿಸಿ ಸಾರ್ವಜನಿಕರಿಗೆ, ವಿಶೇಷ ಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಬೇಕು ಎಂದರು.
2019ರ ಲೋಕಸಭಾ ಚುನಾವಣೆಗಿಂತ ಶೇಕಡವಾರು ಮತದಾನ ಹೆಚ್ಚಿಸಲು ಹಲವಾರು ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ವಹಿಸಲು ವಿಶೇಷ ಕಾಳಜಿ ವಹಿಸಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತಾಡಿ, ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಚುನಾವಣಾ ಜಾಗೃತಿ ಸ್ವೀಪ್ ಚಟುವಟಿಕೆಗಳು ಹಾಗೂ ಕಡಿಮೆ ಮತದಾನ ಕೇಂದ್ರಗಳಲ್ಲಿ ಶೇಕಡವಾರು ಮತದಾನ ಹೆಚ್ಚಿಸಲು ಕೈಗೊಂಡ ಕ್ರಮಗಳ ಕುರಿತು ಸಭೆಗೆ ವಿವರವಾದ ಮಾಹಿತಿ ನೀಡಿದರು.
ಬಳಿಕ ಲೋಕಸಭಾ ಚುನಾವಣೆ-2024 ರ ಅಂಗವಾಗಿ ಜಿಲ್ಲೆಯಲ್ಲಿ ಮತದಾರರಲ್ಲಿ ಚುನಾವಣಾ ಜಾಗೃತಿ ಸ್ವೀಪ್ ಚಟುವಟಿಕೆಗಳ ಅನುಷ್ಟಾನ ಹಾಗೂ ಮತದಾನ ಕೇಂದ್ರಗಳಲ್ಲಿನ ಮೂಲ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಬಳ್ಳಾರಿ ತಾಲ್ಲೂಕಿನ ವಿವಿಧೆಡೆ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್, ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ಸಾಯಬ್, ತಹಶೀಲ್ದಾರ ಗುರುರಾಜ, ತಾಪಂ ಇಒ ಮಡಗಿನ ಬಸಪ್ಪ ಸೇರಿದಂತೆ ಮತ್ತಿತರರು ಇದ್ದರು.




