ಬೆಂಗಳೂರು: ವಿಶ್ವಕಪ್ ಕ್ರಿಕೆಟ್ ಫೈನಲ್ ಮ್ಯಾಚ್ ಗೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ರಾಜರಾಜೇಶ್ವರಿ ನಗರದ ಫ್ಲಾಟ್ ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಒಂದು ಕೆಜಿ ಚಿನ್ನ, ಲ್ಯಾಪ್ ಟಾಪ್, ಮೊಬೈಲ್ ಜಪ್ತಿ ಮಾಡಿದ್ದಾರೆ.
ಆನ್ ಲೈನ್ ನಲ್ಲಿ ಕೆಲವು ವೆಬ್ ಸೈಟ್ ಮೂಲಕ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಜರಾಜೇಶ್ವರಿ ನಗರದ ಫ್ಲಾಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ದಾಳಿ ವೇಳೆ 100 ಗ್ರಾಂನ ಹತ್ತು ಚಿನ್ನದ ಬಿಸ್ಕೆಟ್ ಸೇರಿದಂತೆ 1 ಕೆಜಿ ಚಿನ್ನ ಪತ್ತೆಯಾಗಿದೆ.
ಚಿನ್ನಕ್ಕೆ ಯಾವುದೇ ದಾಖಲೆಗಳು ಸಿಕ್ಕಿಲ್ಲ. ಹೀಗಾಗಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




