ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ಆಟಗಾರರಾದ ಸೂರ್ಯಕುಮಾರ್ ಯಾದವ್, ಅರ್ಶದೀಪ್ ಸಿಂಗ್ ಹಾಗೂ ಸಂಜು ಸ್ಯಾಮ್ಸನ್ ನಗರದಲ್ಲಿ ಮಕ್ಕಳ ಜೊತೆ ಕ್ರಿಕೆಟ್ ಆಡಿ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಸಲಹೆಗಳನ್ನು ಮಕ್ಕಳಿಗೆ ನೀಡಿದರೆ, ಬೌಲರ್ ಆಗಿರುವ ಅರ್ಶದೀಪ್ ಸಿಂಗ್ ಅವರ ಬೌಲಿಂಗ್ ದಾಳಿಯನ್ನು ಹೇಗೆ ಎದುರಿಸಬೇಕು ಎನ್ನುವುದನ್ನು ಹೇಳಿಕೊಟ್ಟರು.
ಐದು ಮಕ್ಕಳು ಆಟಗಾರರನ್ನು ಭೇಟಿ ಮಾಡುವ ಕನಸನ್ನು ನನಸು ಮಾಡಿಕೊಂಡು ಆಟಗಾರರ ಜೊತೆ ನೆಟ್ ನಲ್ಲಿ ತರಬೇತಿ ಪಡೆಯುವ ಅವಕಾಶ ಪಡೆದರು. ಮಕ್ಕಳ ಜೊತೆಗೆ ಕ್ರಿಕೆಟ್ ತಾರೆಯರು ಕಳೆದ ಸಮಯ ಸಣ್ಣದೊಂದು ಉತ್ತಮ ಕೆಲಸ ಕೂಡ ಕೆಲವರಿಗೆ ಎಷ್ಟು ಮಹತ್ವದ ನೆನಪುಗಳನ್ನು ಕೊಡಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ. ಜೊತೆಗೆ ಮಕ್ಕಳಿಗೆ ದೊಡ್ಡ ಕನಸನ್ನು ಕಾಣಲು ಈ ಭೇಟಿಯುವ ಉತ್ತೇಜನ ನೀಡಿದಂತಾಗಿದೆ.
ಎಸ್ಬಿಐ ಲೈಫ್ ಇನ್ಶೂರೆನ್ಸ್ ಮತ್ತು ಬಿಸಿಸಿಐ ಸಂಸ್ಥೆಗಳು ಜೊತೆಗೂಡಿ ಮೀಟ್ ಆಂಡ್ ಗ್ರೀಟ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆ ಸೌಹಾರ್ದ ಭೇಟಿಯ ಕಾರ್ಯಕ್ರಮದ ಮೂಲಕ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ನ ಐವರು ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳು ಭಾರತೀಯ ಕ್ರಿಕೆಟ್ ಆಟಗಾರರನ್ನು ಹತ್ತಿರದಿಂದ ಭೇಟಿಯಾಗಿ ಹರ್ಷಪಟ್ಟರು.




