ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಪರಾಧ ಪ್ರಕರಣಗಳು ಹೆಚ್ಚಿವೆ. ಗಲಾಟೆ, ಚಾಕು ಇರಿತದ ಪ್ರಕರಣಗಳು ಹೆಚ್ಚಿದೆ. ಒಂದು ರೀತಿಯಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದ್ದು, ಇದರ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ಮೇಲೆ ಹಲ್ಲೆ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ತಾಲಿಬಾನ್ ಸರ್ಕಾರಕ್ಕೆ ಬಿಜೆಪಿ ಪಾಠ ಕಲಿಸಲಿದೆ ಎಂದರು.
ಭಾರತ್ ಮಾತಾ ಕೀ ಜೈ ಅಂದವರ ಮೇಲೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಸರ್ಕಾರ ಬಂದ ಮೇಲೆ ಗಲಾಟೆಗಳು, ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಈ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಹಾಗಾಗಿ ಗಲಾಟೆ, ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ ಎಂದರು.
ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹೋರಾಟ ನಡೆಸಲಿದೆ. ನಾಳೆ ಸಭೆ ಸೇರಿ ಹೋರಾಟದ ರೂಪುರೇಷೆಗಳನ್ನು ತೀರ್ಮಾನ ಮಾಡುತ್ತೇವೆ ಎಂದರು.
ನಟ ದರ್ಶನ್ ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಮುಂದೆ ಎಲ್ಲರೂ ಒಂದೇ. ಕಾನೂನನ್ನು ಕೈಗೆತ್ತಿಕೊಂಡಿದ್ದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದರು.
ಕೊಲೆಯಾಗಿರುವ ರೇಣುಕಸ್ವಾಮಿ ಕುಟುಂಬದ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ. ಆತ ಅಮಾಯಕ, ಆತನ ಹೆಂಡತಿ ಗರ್ಭಿಣಿ ಬೇರೆ, ಕಣ್ಣಲ್ಲಿ ನೀರು ಬರುತ್ತದೆ. ರೇಣುಕಸ್ವಾಮಿ ತಪ್ಪು ಮಾಡಿದ್ದರೆ ಕರೆಸಿ ಬುದ್ಧಿ ಹೇಳಬೇಕಿತ್ತು. ಅದು ಬಿಟ್ಟು ಕಾನೂನು ಕೈಗೆತ್ತಿಕೊಂಡಿದ್ದು ಸರಿಯಲ್ಲ ಎಂದರು.
ಈ ಘಟನೆ ಇಡೀ ಚಿತ್ರರಂಗಕ್ಕೆ ಕಳಂಕ. ಕೊಲೆಯಾದವನು ಯಾವುದೇ ಕ್ರಿಮಿನಲ್ ಚಟುವಟಿಕೆಯಲ್ಲಿ ಇರಲಿಲ್ಲ. ಆತ ಅಮಾಯಕ. ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕು ಎಂದರು.




