ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರೈತರ ದುರ್ಮರಣ

4 years ago

ಬೆಳಗಾವಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರೈತರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಸವದತ್ತಿ ತಾಲೂಕಿನ ಹಿರಿಯೂರುದಲ್ಲಿ ಈ ಘಟನೆ ನಡೆದಿದ್ದ ಫಕಿರಪ್ಪ ಚಂದರಗಿ (ವ-54) ಮತ್ತು ಮಹಾದೇವ ಮೇತ್ರಿ (ವ-40) ಎಂಬುವರು ಮೃತಪಟ್ಟಿದ್ದಾರೆ.

ಮಳೆಗಾಳಿಗೆ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿದೆ ಎಂದು ಸ್ಥಳಿಯರು ಆರೋಪಿಸಿದ್ದು ವಿದ್ಯುತ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸವದತ್ತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply