ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದು ಸಾಬೀತಾದಲ್ಲಿ, ಸುಳ್ಳು ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಡಿಜಿಪಿಯಿಂದ ಅನುಮೋದಿಸಲಾಗಿರುವ ಸುತ್ತೋಲೆಯನ್ನು ಹೊರಡಿಸಲಾಗಿದೆ. ಈ ಮೂಲಕ ಮೀಸಲಾತಿ ಅಕ್ರಮ ತಡೆಯಲು ಸರ್ಕಾರ ಮುಂದಾಗಿದೆ.




