ಹೊಸಪೇಟೆ: ರಾಜ್ಯ ಸರ್ಕಾರ ಕೇವಲ ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೂರು ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ನಮ್ಮ ಸರ್ಕಾರ ಕಂದಾಯ ಇಲಾಖೆ ಮೂಲಕ ಮಾಡಿ, ಹೊಸ ಇತಿಹಾಸ ಬರೆಯುತ್ತಿದೆ ಎಂದರು.
ಕಂದಾಯ ಇಲಾಖೆಯ ಮೂಲಕ ನೀಡುತ್ತಿರುವ ಈ ಭೂ ಗ್ಯಾರಂಟಿ ಇತಿಹಾಸದ ಪುಟ ಸೇರಲಿದೆ. ಪ್ರತಿಯೊಬ್ಬ ವ್ಯಕ್ತಿಗೂ ತಾನು ವಾಸವಿರುವ ಜಾಗವನ್ನು ತನ್ನದಾಗಿಸಿಕೊಳ್ಳುವ ಆಸೆ ಇರುತ್ತದೆ. ಪರಿಶಿಷ್ಟರು, ಹಿಂದುಳಿದವರು ಹಾಗೂ ಭೂರಹಿತವಾಗಿರುವವರು ಕಳೆದ ಹಲವು ವರ್ಷಗಳಿಂದ ದಾಖಲೆ ಇಲ್ಲದೆ ಮನೆ ಕಟ್ಟಿಕೊಂಡು ಪರದಾಡುತ್ತಿದ್ದರು. ಹೀಗಾಗಿ ನಮ್ಮ ಸರ್ಕಾರ ಇದಕ್ಕೆ ಪರಿಹಾರ ನೀಡಿದೆ ಎಂದರು.
ವಿಜಯನಗರ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಿದ್ದು, 79 ಸಾವಿರ ರೈತರಿಗೆ ಪೋಡಿ ದಾಖಲೆ ನೀಡಲಾಗಿದೆ. ಇಡೀ ದೇಶಕ್ಕೆ ಇದು ಹೊಸ ಮಾದರಿ. ನಮ್ಮ ಸರ್ಕಾರ ಎರಡು ವರ್ಷ ಪೂರೈಸಿದ್ದು, ನಾವು ಕೇವಲ ಸಂಭ್ರಮಾಚರಣೆ ಮಾಡಲು ಈ ಕಾರ್ಯಕ್ರಮ ಮಾಡುತ್ತಿಲ್ಲ. ಜನರು ನಮಗೆ ಕೊಟ್ಟ ಅವಕಾಶ, ಆಶೀರ್ವಾದಕ್ಕೆ ಋಣ ತೀರಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.
ನಾವು ಕೇವಲ ಗ್ಯಾರಂಟಿ ಯೋಜನೆಗಳ ಮೇಲೆ, ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕು ಕಟ್ಟಿಕೊಟ್ಟು ರಾಜಕಾರಣ ಮಾಡುತ್ತಿದ್ದೇವೆ ಎಂದರು.
ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಗಮಿಸಲಿದ್ದಾರೆ ಎಂದರು.
ಗ್ಯಾರಂಟಿಗಳಿಂದ ಅಭಿವೃದ್ಧಿಯಾಗುತ್ತಿಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ. ನಮ್ಮದು ಕಾಂಗ್ರೆಸ್ ಗ್ಯಾರಂಟಿ. ಅವರು ಮೋದಿ ಗ್ಯಾರಂಟಿ ಎಂದರು. ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ, ಹರಿಯಾಣ ರಾಜ್ಯಗಳಲ್ಲಿ ಅವರು ಏನು ಮಾಡಿದ್ದಾರೆ? ನಮ್ಮ ಯೋಜನೆ ನಕಲು ಮಾಡಿದರು. ಇಡೀ ದೇಶಕ್ಕೆ ಕಾಂಗ್ರೆಸ್ ಆಡಳಿತ ಮಾದರಿಯಾಗಿದೆ ಎಂದರು.
ಪ್ರತಿ ಹಂತದಲ್ಲೂ ನಮ್ಮ ಕಾರ್ಯಕ್ರಮ ಮಾದರಿಯಾಗಿದೆ. ಬಿಜೆಪಿಯವರು ನರೇಗಾ ಯೋಜನೆ ಬಗ್ಗೆ ಅನೇಕ ಟೀಕೆ ಮಾಡಿದರು. ಆದರೂ ನರೇಗಾ ಯೋಜನೆ ತೆಗೆಯಲು ಸಾಧ್ಯವಾಯಿತೇ? ನಾವು ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದೆವು, ಅದನ್ನು ಬಿಜೆಪಿಯವರಿಂದ ತೆಗೆದು ಹಾಕಲು ಸಾಧ್ಯವಾಯಿತೇ? ಎಂದರು.
ಯುಪಿಎ ಸರ್ಕಾರದಲ್ಲಿ ಬುಡಕಟ್ಟು ಜನರಿಗೆ ಭೂಮಿ ಕೊಟ್ಟೆವು. ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದೆವು, ಶೈಕ್ಷಣಿಕ ಹಕ್ಕು ಕಾಂಗ್ರೆಸ್ ಜಾರಿಗೆ ತಂದಿತು. ಬಿಜೆಪಿ ಇಂತಹ ಯೋಜನೆ ಜಾರಿ ಮಾಡಿದೆಯೇ? ಇಲ್ಲ. ಅವರು ಕೇವಲ ಟೀಕೆ ಮಾಡುತ್ತಾರೆ. ಟೀಕೆ ಮಾಡುವವರನ್ನು ತಡೆಯಲಾಗದು. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದರು.




