ದಾವಣಗೆರೆ: ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ: ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್ ವಾರು ಬೆಳೆದ ವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆಯ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್ನ ಲ್ಲಿ ಅಪ್ಲೋನಡ್ ಮಾಡಬಹುದು. ಮುಂಗಾರು ರೈತರ ಬೆಳೆ ಸಮೀಕ್ಷೆ 2024-25 (Kharif Season Farmer App 2024-25) ಆ್ಯಪ್ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು.
ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ವಿವಿಧ ಉದ್ದೇಶಗಳಿಗಾಗಿ ಬಳಸಬಹುದು: ಕೃಷಿ, ರೇಷ್ಮೆ, ತೋಟಗಾರಿಕಾ ಬೆಳೆಗಳ ವಿಸ್ತೀರ್ಣ ಎಣಿಕೆ ಕಾರ್ಯಗಳಲ್ಲಿ, ಬೆಳೆ ವಿಮೆ ಯೋಜನೆಯ ಸರ್ವೆ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್.ಟಿ.ಸಿ.ಯಲ್ಲಿ ಬೆಳೆ ವಿವರಗಳ ದಾಖಲಾತಿಗಾಗಿ, ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್ ಅಡಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಹಾನಿಗೊಳಗಾದ ಬೆಳೆಯ ವಿಸ್ತೀರ್ಣದ ವಿವರ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ, ಮೇಲೆ ತಿಳಿಸಿದ ಕಾರ್ಯಗಳಿಗೆ ಬೆಳೆ ಸಮೀಕ್ಷೆಯ ಮಾಹಿತಿಯು ಅತ್ಯಗತ್ಯವಾಗಿದ್ದು, ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್ ನಮೂದಿಸಬೇಕು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಆಯಾ ಗ್ರಾಮದಲ್ಲಿರುವ ವಿದ್ಯಾವಂತ ಯುವಕರನ್ನು ಖಾಸಗಿ ನಿವಾಸಿಗಳೆಂದು ಗುರುತಿಸಲಾಗಿದ್ದು ಅವರ ಸಹಾಯದಿಂದಲೂ ಬೆಳೆ ಸಮೀಕ್ಷೆ ಆ್ಯಪ್ ತಾವು ಬೆಳೆದ ಬೆಳೆಯನ್ನು ದಾಖಲಿಸಬಹುದು. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ರೈತರೇ ಖುದ್ದು, ಖಾಸಗಿ ನಿವಾಸಿಗಳ ಸಹಾಯ ಪಡೆದು ಬೆಳೆ ಸಮೀಕ್ಷೆ ಮಾಡಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.




