ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪಕ್ಕೆ ಸಿಲುಕಿರುವ ಬಿಜೆಪಿ ಶಾಸಕ ಸಿ ಟಿ ರವಿ ಅವರನ್ನು ಬಂಧಿಸಿದ ಬೆಳಗಾವಿ ಪೊಲೀಸರು ಸಿಐಡಿ ಮುಂದೆ ತಮ್ಮ ಹೇಳಿಕೆ ದಾಖಲಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಸಮಯದಲ್ಲಿ ವಿಧಾನ ಪರಿಷತ್ತಿನಲ್ಲಿ ಶಾಸಕ ಸಿ ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕುರಿತು ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಲ್ಲಿ ಸಿಲುಕಿದ್ದರು.
ಈ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ ದೂರು ಆಧರಿಸಿ ಬೆಳಗಾವಿಯ ಪೊಲೀಸರು ಬಿಜೆಪಿಯ ಶಾಸಕ ಸಿ ಟಿ ರವಿ ಅವರನ್ನು ಬಂಧಿಸಿದ್ದರು. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿತ್ತು. ಆನಂತರ ಸರ್ಕಾರ ಈ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿತ್ತು.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರ ತಂಡ ಈಗಾಗಲೇ ದೂರುದಾರರಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಆರೋಪಿ ಸಿ ಟಿ ರವಿ ಸೇರಿದಂತೆ ಸಂಬಂಧಪಟ್ಟ ಎಲ್ಲರಿಂದ ಹೇಳಿಕೆ ದಾಖಲು ಮಾಡಿಕೊಂಡಿದೆ. ಇದೀಗ ಸಿ.ಟಿ.ರವಿ ಅವರನ್ನು ಬಂಧಿಸಿದ ಡಿಸಿಪಿ ರೋಹನ್ ಜಗದೀಶ್ ಮತ್ತು ಎಸಿಪಿ ಸದಾಶಿವ ಕಟ್ಟಿಮನಿ ಅವರಿಗೆ ತನಿಖಾ ತಂಡದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಿತ್ತು. ಅದರಂತೆ ಇಬ್ಬರೂ ಪೊಲೀಸ್ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಸಿಐಡಿ ಕಚೇರಿಗೆ ಆಗಮಿಸಿ ತನಿಖಾ ತಂಡದ ಮುಂದೆ ತಮ್ಮ ಹೇಳಿಕೆ ದಾಖಲಿಸಿದರು.




