ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಮುಖಂಡ ಸಿ ಟಿ ರವಿ ಇದೀಗ ತಮ್ಮನ್ನು ಬಂಧಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ರಾಜ್ಯಪಾಲರಿಗೆ ಸಮಗ್ರ ವರದಿ ನೀಡಿದ ನಂತರ ಅವರು ಇದೀಗ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ಬೆಳಗಾವಿಯಲ್ಲಿ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
ನನ್ನನ್ನು ಬೆಳಗಾವಿಯಲ್ಲಿ ಅಕ್ರಮವಾಗಿ ಪೊಲೀಸರು ಬಂಧಿಸಿದ್ದರು. ದೂರು ಕೊಟ್ಟ ಬಳಿಕವೂ ಪೊಲೀಸರು ಎಫ್.ಐ.ಆರ್. ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿದ್ದರು ಎಂದು ಅವರು ದೂರಿನಲ್ಲಿ ಆರೋಪಿಸಿದ್ದು, ಕರ್ತವ್ಯ ಲೋಪ ಎಸಗಿದ ಈ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.




