ಚಾಮರಾಜನಗರ: ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾ ಘಟಕ ಚಾಮರಾಜನಗರ ಜಿಲ್ಲಾ ಪ್ರಥಮ ಸುಗಮ ಸಂಗೀತ ಸಮ್ಮೇಳನ ಸರ್ವಾಧ್ಯಕ್ಷರನ್ನಾಗಿ ಪ್ರಸಿದ್ಧ ಸುಗಮ ಸಂಗೀತ ಗಾಯಕ ಹಾಗೂ ಸಂಗೀತ ನಿರ್ದೇಶಕ ಸಿ ವಿಶ್ವನಾಥ್ ಅವರನ್ನು ಆಯ್ಕೆ ಮಾಡಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಸುಗಮ ಸಂಗೀತ ಕ್ಷೇತ್ರದ ಸುಧೀರ್ಘ ಸೇವೆಯನ್ನು ಪರಿಗಣಿಸಿ ಕರ್ನಾಟಕ ಕಲಾ ಶ್ರೀ ಪ್ರಶಸ್ತಿ ಪುರಸ್ಕೃತ ಸಿ. ವಿಶ್ವನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿ ಬಸವರಾಜು ತಿಳಿಸಿದ್ದಾರೆ.
ಸೆಪ್ಟಂಬರ್ ತಿಂಗಳ 21 ರಂದು ಡಾ. ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಮ್ಮೇಳನವನ್ನು ನಡೆಸಲು ಸಭೆಯು ತೀರ್ಮಾನಿಸಿದೆ.
ಸರ್ವಾಧ್ಯಕ್ಷರ ಮೆರವಣಿಗೆ, ಉದ್ಘಾಟನೆ, ಸ್ಥಳೀಯ ವಿದ್ಯಾರ್ಥಿಗಳಿಂದ ಸಮೂಹ ಗಾಯನ, ಸುಗಮ ಸಂಗೀತ ಕುರಿತ ವಿಚಾರ ಸಂಕಿರಣ ಸಂಜೆ ರಾಜ್ಯ ಮಟ್ಟದ ಪ್ರಸಿದ್ಧ ಗಾಯಕ ಗಾಯಕಿಯರು ಹಾಗೂ ಸ್ಥಳೀಯ ಕಲಾವಿದರಿಂದ ಗೀತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಭೆ ನಿರ್ಣಯ ಕೈಗೊಂಡಿತು.
ಅಧಿಕೃತವಾಗಿ ಸಿ ವಿಶ್ವನಾಥ್ ಅವರನ್ನು ಸಮ್ಮೇಳನಕ್ಕೆ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಪದಾಧಿಕಾರಿಗಳು ಅವರ ನಿವಾಸದಲ್ಲಿ ಶಾಲು ಹೊಂದಿಸಿ ಫಲ ತಾಂಬೂಲ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ ಬಸವರಾಜು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿಎಂ ನರಸಿಂಹಮೂರ್ತಿ ಜಿಲ್ಲಾ ಕಾರ್ಯದರ್ಶಿ ನಟರಾಜ್ ಹರದನಹಳ್ಳಿ, ಜಿ .ರಾಜಪ್ಪ ಮತ್ತು ಪದಾಧಿಕಾರಿಗಳು ಹಾಜರಿದ್ದರು.




