ಕೊರೋನಾ ಮೂರನೇ ಅಲೆ ತಡೆಯಲು ಲಸಿಕೆ ಅನಿವಾರ್ಯ: ರವಿಸುಬ್ರಮಣ್ಯ

5 years ago

ಕೋವಿಡ್‌ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್‌ ರ‍್ಯಾಲಿ

ಜಯನಗರದ ಯುನೈಟೆಡ್‌ ಆಸ್ಪತ್ರೆಯ ಸಹಯೋಗದಲ್ಲಿ ರೋಟರ‍್ಯಾಕ್ಟ್‌ ಬೆಂಗಳೂರು ಸೌತ್‌ ಅವರಿಂದ ಆಯೋಜನೆ

ಸೈಕಲ್‌ ಜಾಥಾ ಸಂಧರ್ಭದಲ್ಲಿ ಲಸಿಕೆಯ ನೊಂದಣಿಗಾಗಿ ಕಿಯೋಸ್ಕ್‌ಗಳ ಸ್ಥಾಪನೆ

ಬೆಂಗಳೂರು: ಕೊರೋನಾ ಮೂರನೇ ಅಲೆ ಹಾಗೂ ಹೆಚ್ಚಿನ ಪ್ರಾಣಹಾನಿಯನ್ನು ತಡೆಯಲು ಲಸಿಕೆಯನ್ನು ಪಡೆದುಕೊಳ್ಳುವುದು ಅನಿವಾರ್ಯ ಎಂದು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಹೇಳಿದರು.

ಕರೋನಾ ಸಾಂಕ್ರಾಮಿಕದ ವಿರುದ್ದ ಹೋರಾಟದ ಪ್ರಮುಖ ಅಸ್ತ್ರವಾಗಿರುವ ಲಸಿಕಾಕರಣದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಜಯನಗರದ ಯುನೈಟೆಡ್‌ ಆಸ್ಪತ್ರೆಯ ಸಹಯೋಗದಲ್ಲಿ ರೋಟರ‍್ಯಾಕ್ಟ್‌ ಬೆಂಗಳೂರು ಸೌತ್‌ ಆಯೋಜಿಸಿದ್ದ ಸೈಕಲ್‌ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಕರೋನಾ ಮೂರನೇ ಅಲೆಯ ಪರಿಣಾಮ ನಿಧಾನವಾಗಿ ಗೋಚರವಾಗುತ್ತಿದೆ. ಇದನ್ನು ತಡೆಯವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಬಹಳ ಅವಶ್ಯಕ. ಈ ನಿಟ್ಟಿನಲ್ಲಿ ಜಯನಗರದ ಯುನೈಟೆಡ್‌ ಆಸ್ಪತ್ರೆ ರೋಟರ‍್ಯಾಕ್ಟ್‌ ಜೊತೆಗೂಡಿ ಜಾಗೃತಿ ರ‍್ಯಾಲಿಯನ್ನು ಆಯೋಜಿಸಿರುವುದು ಬಹಳ ಒಳ್ಳೆಯ ಕೆಲಸವಾಗಿದೆ. ಜನರು ಇದುವರೆಗೂ ಲಸಿಕೆಯನ್ನು ಹಾಕಿಸಿಕೊಳ್ಳದೇ ಇರುವಂತಹವರು ಕೂಡಲೇ ಲಸಿಕೆಯನ್ನು ಹಾಕಿಸಿಕೊಳ್ಳಲು ಮುಂದಾಗಬೇಕು ಎಂದರು.

ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ. ವಿಕ್ರಮ್‌ಸಿದ್ದಾರೆಡ್ಡಿ ಮಾತನಾಡಿ, ಕರೋನಾ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಅಸ್ತ್ರವಾಗಿರುವ ಕರೋನಾ ಲಸಿಕಾಕರಣದ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಬಹಳ ಅವಶ್ಯಕವಾಗಿದೆ. ನಮ್ಮ ಆಸ್ಪತ್ರೆಯ ಸಾಮಾಜಿಕ ಕಳಕಳಿಯ ಹಿನ್ನೆಲೆಯಲ್ಲಿ ನಾವುಗಳು ಇಂದು ಈ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದು, ಇಲ್ಲಿ ಭಾಗವಹಿಸಿರುವ ಎಲ್ಲಾ ಸೈಕ್ಲಿಸ್ಟ್‌ ಗಳಿಗೆ ಉಚಿತವಾಗಿ ಎರಡೂ ಡೋಸ್‌ಗಳ ಲಸಿಕೆಯನ್ನು ನೀಡುತ್ತಿದ್ದೇವೆ ಎಂದರು.

ಸೈಕಲ್‌ ರ‍್ಯಾಲಿಯಲ್ಲಿ 250 ಕ್ಕೂ ಹೆಚ್ಚು ಸೈಕ್ಲಿಸ್ಟ್ ಗಳು, ವೈದ್ಯರು, ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್‌ ವರ್ಕರ್ ಗಳು ಪಾಲ್ಗೊಂಡಿದ್ದರು. 6 ಕಿಲೋಮೀಟರ್‌ ಗಳಷ್ಟು ನಡೆದ ಸೈಕಲ್‌ ರ‍್ಯಾಲಿಯಲ್ಲಿ ಲಸಿಕೆಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.

Leave a Reply