ಮೈಸೂರು: ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಸಿಎಂ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದ್ದಾರೆ.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಸಂವಿಧಾನ ಬದಲಾಯಿಸುವುದು ಬಿಜೆಪಿ ಮತ್ತು ಸಂಘ ಪರಿವಾರದ ಹುನ್ನಾರ. ಕೇಂದ್ರ ಸಚಿವರಾಗಿದ್ದವರೇ ಈ ಮಾತನ್ನು ಬಹಿರಂಗವಾಗಿ ಹೇಳಿದ್ದಾರೆ. ಸಂಘ ಪರಿವಾರ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲಿ ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರಿಸಿದ ಮಾತುಗಳನ್ನು ಪ್ರಸ್ತಾಪಿಸಿದ ಅವರು, ಸಮಾಜದಲ್ಲಿನ ಎಲ್ಲಾ ಜಾತಿ, ವರ್ಗ ಮತ್ತು ಧರ್ಮದ ಬಡವರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವುದಕ್ಕಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ ಎಂದರು.
ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಲಿ. ಭಾರತೀಯರನ್ನು ನಂಬಿಸಿ, ಭ್ರಮೆ ಹುಟ್ಟಿಸಿ, ಭಾವನೆಗಳನ್ನು ಕೆರಳಿಸಿ ಭಯಾನಕವಾಗಿ ವಂಚಿಸುವವರಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ನುಡಿದಂತೆ ನಡೆದು ರಾಜ್ಯದ ಜನರ ಬದುಕಿಗೆ ಸ್ಪಂದಿಸಿದ ನಮಗೆ ಮತ ಹಾಕಿದರೆ ಆ ಮತಕ್ಕೆ ಗೌರವ ಬರುತ್ತದಾ? ಕೊಡಗು ಜಿಲ್ಲೆಯ ಮತದಾರರು ಪ್ರಜ್ಞಾವಂತರಾಗಿದ್ದಾರೆ. ಯೋಚಿಸಿ ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದರು.




