ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದು, ನಟ ದರ್ಶನ್ ಬೆನ್ನು ನೋವಿನ ಕಾರಣ ಗೈರಾಗಿದ್ದಾರೆ. ದರ್ಶನ್ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿತು. ಅಲ್ಲದೆ ವಿಚಾರಣೆ ಇದ್ದಾಗ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕೋರ್ಟ್ ತಾಕೀತು ಮಾಡಿದೆ.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ದರ್ಶನ್, ಬೆನ್ನು ನೋವಿನ ಕಾರಣ ನೀಡಿ ನ್ಯಾಯಾಲಯದ ವಿಚಾರಣೆಯಿಂದ ವಿನಾಯಿತಿ ಕೋರಿದ್ದರು. ಇತ್ತೀಚೆಗಷ್ಟೆ ‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ನಟ ದರ್ಶನ್ ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಸುಮಾರು 28 ಗಂಟೆಗಳ ಕಾಲ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಇದರಿಂದಾಗಿ ಅವರಿಗೆ ಬೆನ್ನು ನೋವು ಉಲ್ಬಣವಾಗಿದ್ದ ಕಾರಣ ವಿಚಾರಣೆಗೆ ಗೈರಾಗಿದ್ದರು. ಈ ವಿಷಯವನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಹೈಕೋರ್ಟ್ ಜಾಮೀನು ಷರತ್ತಿನಲ್ಲಿ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಅನುಮತಿ ನೀಡಿತ್ತು ಎಂದು ತಿಳಿಸಿ ಆದೇಶ ಪ್ರತಿಯನ್ನು ನ್ಯಾಯಾಧೀಶರಿಗೆ ವಕೀಲರು ನೀಡಿದರು.
ಆದರೆ ಸಮಜಾಯಿಷಿಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ವಿಚಾರಣೆ ವೇಳೆ ಆರೋಪಿಗಳು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸ್ಪಷ್ಟವಾಗಿ ಹೇಳಿದರು.
ಪ್ರಕರಣದ ಸಂಬಂಧ ನಡೆದ ವಿಚಾರಣೆಗೆ ದರ್ಶನ್ ಒಬ್ಬರನ್ನು ಹೊರತುಪಡಿಸಿ ಇನ್ನುಳಿದ ಆರೋಪಿಗಳಾದ ಪವಿತ್ರಾ ಗೌಡ, ನಂದಿಶ್, ಜಗದೀಶ್, ನಾಗರಾಜ್, ವಿನಯ್, ಪವನ್, ಲಕ್ಷ್ಮಣ, ದೀಪಕ್, ಪ್ರದೋಶ್, ಕಾರ್ತಿಕ್ ಕೇಶವ ಮೂರ್ತಿ ಇನ್ನೂ ಕೆಲವರು ಹಾಜರಾಗಿದ್ದರು.
ಇನ್ನು ಕೆಲ ಆರೋಪಿಗಳು, ಪೊಲೀಸರು ವಶಪಡಿಸಿಕೊಂಡಿರುವ ತಮ್ಮ ಮೊಬೈಲ್ಗಳನ್ನು ಮರಳಿಸಬೇಕು ಎಂದು ಮನವಿ ಮಾಡಿದರು. ಬಳಿಕ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಲಾಯಿತು.




