ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಮತ್ತೆ ಜೈಲೇ ಗತಿಯಾಗಿದೆ. ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರು ವಾದ ಮಾಡಲು ಸಮಯ ಕೇಳಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಎಸ್ಪಿಪಿ ಕೋರ್ಟ್ ಹಾಲ್ನಲ್ಲಿ ನಡೆದ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರವಾಗಿ ಎಸ್ಪಿಪಿ ಪ್ರಸನ್ನಕುಮಾರ್ ಅವರನ್ನು ಕರೆಸುವಂತೆ ನ್ಯಾಯಾಧೀಶರು ಸೂಚಿಸಿದರು. ರವಿಶಂಕರ್ ಅರ್ಜಿ ವಿಚಾರಣೆಗೂ ಎಸ್ಎಸ್ಪಿ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅವರ ಹಾಜರಾತಿಗೆ ನ್ಯಾಯಾಲಯ ಸೂಚಿಸಿತು. ಇದಕ್ಕಾಗಿ ಕೆಲಕಾಲ ವಿಚಾರಣೆ ಮುಂದೂಡಲಾಯಿತು.
ನಂತರ ಶುರುವಾದ ಪವಿತ್ರಗೌಡ ಗೌಡ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್ಪಿಪಿ ಪರ ವಕೀಲರು 15 ದಿನಗಳ ಸಮಯಾವಕಾಶ ಕೇಳಿದರು. ಸಮಯಾವಕಾಶ ನೀಡಲು ಆಗಲ್ಲ, ಇವತ್ತೇ ನಿಮ್ಮ ಸಿನಿಯರ್ ವಕೀಲರನ್ನು ಕರೆಸಿ ಎಂದು ನ್ಯಾಯಾಧೀಶರು ಸೂಚಿಸಿ, ಜಾಮೀನು ಅರ್ಜಿಯನ್ನು ಕೆಲ ಕಾಲ ಮುಂದೂಡಿದರು. ಬಳಿಕ ಅಕ್ಟೋಬರ್ 4ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಈಗಾಗಲೆ ದರ್ಶನ್, ಲಕ್ಷ್ಮಣ್ ಜಾಮೀನು ಅರ್ಜಿಯನ್ನು ಅ. 4ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಸದ್ಯ ಪವಿತ್ರಾ ಗೌಡ ಅರ್ಜಿ ವಿಚಾರಣೆ ಕೂಡ ಮುಂದೂಡಿಕೆ ಮಾಡಿ ನ್ಯಾಯಾಧೀಶ ಶ್ರೀ ಜೈಶಂಕರ್ ಆದೇಸಿದ್ದಾರೆ.




