ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಜಾಮೀನಿನ ಪ್ರತಿ ತಲುಪಿಸಿದ ಕೂಡಲೇ ನಿಯಮಾವಳಿಗಳನ್ನು ಪೂರ್ಣಗೊಳಿಸಿ ಬಳ್ಳಾರಿ ಸೆಂಟ್ರಲ್ ಜೈಲಿನಿಂದ ನಟ ದರ್ಶನ್ ಬಿಡುಗಡೆಯಾಗಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್
ಬರೋಬರಿ 140 ದಿನಗಳ ಜೈಲುವಾಸದಿಂದ ಮುಕ್ತಿ ಪಡೆದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ನೀಡಿದೆ.
ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು.
ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದ್ದರು. ಬೆನ್ನುಹುರಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯಕೀಯ ವರದಿ ಆಧರಿಸಿ ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಸಂಬಂಧ ವಕೀಲರು ಮತ್ತು ತನಿಖಾಧಿಕಾರಿಗಳ (ಪ್ರಾಸಿಕ್ಯೂಷನ್) ಪರ ವಿಶೇಷ ಸರ್ಕಾರಿ ವಕೀಲರ ವಾದ-ಪ್ರತಿವಾದ ಆಲಿಸಿ ಇಂದಿಗೆ ಆದೇಶವನ್ನು ಕಾಯ್ದಿರಿಸಲಾಗಿತ್ತು.
ವಾದ ಮಂಡನೆ ವೇಳೆ ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್, ದರ್ಶನ್ ಬೆನ್ನುಹುರಿ/ನರದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಸಾಂಪ್ರದಾಯಿಕ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಬೆನ್ನು ಮೂಳೆಯ ಎಂಆರ್‌ಐ ಸ್ಕ್ಯಾನ್ ಮಾಡಲಾಗಿದೆ. ದರ್ಶನ್ ಬೆನ್ನಿನ ಎಲ್-5 ಎಸ್-1 ಡಿಸ್ಕ್‌ನಲ್ಲಿ ನ್ಯೂನತೆ ಕಂಡುಬಂದಿದೆ. ದರ್ಶನ್‌ಗೆ ಓಡಾಡಲು ಆಗುತ್ತಿಲ್ಲ ಹಾಗೂ ಕುಳಿತುಕೊಳ್ಳಲು ಆಗುತ್ತಿಲ್ಲ. ನರದ ತೊಂದರೆಯಿಂದ ಕಾಲಿನಲ್ಲಿ ಸ್ಪರ್ಶದ ಸಮಸ್ಯೆ ಆರಂಭವಾಗಿದೆ.
ಕಾಲಿನಲ್ಲಿ ಶಕ್ತಿ ಕಳೆದುಕೊಳ್ಳುವಂತಾಗಲಿದೆ. ಚಿಕಿತ್ಸೆ ಪಡೆಯದೇ ಇದ್ದರೆ ಮೂತ್ರ ನಿಯಂತ್ರಣ ಸೇರಿ ದೀರ್ಘಾವಧಿಯ ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಲಿದ್ದಾರೆ ಎಂಬುದಾಗಿ ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯ ನರರೋಗ ತಜ್ಞ ವಿಶ್ವನಾಥ್ ವರದಿ ನೀಡಿದ್ದಾರೆ ಎಂದು ವಿವರಿಸಿದರು.
ದರ್ಶನ್ ಈಗಾಗಲೇ ಎರಡು ಬಾರಿ ಮೈಸೂರಿನ ಖಾಸಗಿ ಆಸ್ಪತ್ರೆ ಅಪೋಲೋದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ತಮ್ಮದೇ ಖರ್ಚಿನಲ್ಲಿ ಈಗ ಅಲ್ಲಿಯೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಕಷ್ಟು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿವೆ. ಮೈಸೂರಿನಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಯಾವುದೇ ಸಮಸ್ಯೆಯಾಗುವುದಿಲ್ಲ. ಆರಂಭದಲ್ಲಿ ಮೂರು ತಿಂಗಳು ಮಧ್ಯಂತರ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಈ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ತನಿಖಾಧಿಕಾರಿಗಳ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನಕುಮಾರ್, ವೈದ್ಯಕೀಯ ಚಿಕಿತ್ಸೆ ಪಡೆಯಲು ಜಾಮೀನು ನೀಡಬಹುದು. ಅದಕ್ಕೆ ನಾವು ಆಕ್ಷೇಪಿಸುವುದಿಲ್ಲ. ಆದರೆ, ಎಷ್ಟು ದಿನ ಜಾಮೀನು ನೀಡಬೇಕಿದೆ ಎಂಬುದು ಮುಖ್ಯ. ಅನಿರ್ದಿಷ್ಟಾವಧಿಗೆ ವೈದ್ಯಕೀಯ ಚಿಕಿತ್ಸೆಗೆ ಜಾಮೀನು ನೀಡಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ತಜ್ಞ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿ ರಚಿಸಿ, ಅವರು ನೀಡುವ ವರದಿಯನ್ನು ಆಧರಿಸಿ ದರ್ಶನ್‌ಗೆ ವೈದ್ಯಕೀಯ ಜಾಮೀನು ಮಂಜೂರು ಮಾಡಬೇಕು. ನಾಳೆಯೇ ದರ್ಶನ್ ಅವರು ಬೆಂಗಳೂರಿಗೆ ಬಂದು ಇಲ್ಲಿ ವೈದ್ಯಕೀಯ ಮಂಡಳಿಯ ತಜ್ಞರ ತಪಾಸಣೆಗೆ ಒಳಗಾಗಲಿ. ವೈದ್ಯರು ಏನೆಲ್ಲಾ ಚಿಕಿತ್ಸೆ, ಎಷ್ಟು ದಿನ ಚಿಕಿತ್ಸೆ ಅಗತ್ಯವಿದೆ ಎಂದು ವರದಿ ನೀಡಲಿ. ಅದನ್ನು ಆಧರಿಸಿ ನ್ಯಾಯಾಲಯ ನಿರ್ಧರಿಸಬೇಕು ಎಂದು ಕೋರಿದರು.
ಈ ವಾದವನ್ನು ಬಲವಾಗಿ ಆಕ್ಷೇಪಿಸಿದ ಸಿ.ವಿ. ನಾಗೇಶ್, ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯ ನರರೋಗ ತಜ್ಞರು ವರದಿ ನೀಡಿದ್ದಾರೆ. ಆ ವರದಿಯನ್ನು ಅನುಮಾನಿಸಲು ಕಾರಣಗಳೇ ಇಲ್ಲ. ಬೆಂಗಳೂರಿಗೆ ಏಕೆ ಕರೆದುಕೊಂಡು ತಪಾಸಣೆ ನಡೆಸಬೇಕು. ಈಗಾಗಲೇ ಮೈಸೂರಿನಲ್ಲಿ ಚಿಕಿತ್ಸೆ ಪಡೆಯಲಾಗಿದೆಯಲ್ಲವೇ? ಬಳ್ಳಾರಿಯಲ್ಲಿ ಪರೀಕ್ಷೆ ನಡೆಸಲಾಗಿದೆಯೇಲ್ಲವೇ? ಇನ್ನೆಷ್ಟು ಸಲ ಪರೀಕ್ಷೆ ನಡೆಸಿ ವರದಿ ಪಡೆಯಬೇಕು. ಮೈಸೂರಿನಲ್ಲಿ ಏಕೆ ಚಿಕಿತ್ಸೆ ಕೊಡಬಾರದು? ಖಾಸಗಿ ಆಸ್ಪತ್ರೆಯಲ್ಲಿ ವರದಿ ಪಡೆದರೆ ಸಮಸ್ಯೆ ಏನು ಎಂದು ಪ್ರಶ್ನಿಸಿದರಲ್ಲದೆ, ವೈದ್ಯಕೀಯ ತುರ್ತು ಇರುವುದರಿಂದ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಬುಧವಾರ ಮಧ್ಯಂತರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆದೇಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ನಟ ದರ್ಶನ್ ಗೆ ಮಧ್ಯಂತರ ಷರತ್ತು ಬದ್ಧ ಜಾಮೀನು ನೀಡಿತು.




