ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು ತಮ್ಮ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಅಭಿಮಾನಿಗಳಿಗಾಗಿ ವಿಡಿಯೊ ಸಂದೇಶವನ್ನು ಇಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು ಅದರಲ್ಲಿ ಕೆಲವು ವಿಷಯಗಳನ್ನು ಹೇಳಿದ್ದು ಕುತೂಹಲ ಮೂಡಿಸಿದೆ.
ಎಲ್ಲ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ. ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಕಡಿಮೆ. ಈಗ ನಾನು ಯಾಕೆ ನಾನು ಕ್ಯಾಮೆರಾ ಮುಂದೆ ಬಂದೆ ಎಂದರೆ ಅದು ನನ್ನ ನನ್ನ ಬರ್ತ್‌ಡೇ ವಿಚಾರವಾಗಿ……
ನಿಮ್ಮನ್ನು ಭೇಟಿಯಾಗಬೇಕೆಂದು ನನಗೂ ಆಸೆ ಇತ್ತು. ನೀವೂ ಆಸೆ ಪಟ್ಟಿದ್ರಿ. ಈ ಬಾರಿ ಸಮಸ್ಯೆಯೇನೆಂದರೆ, ದೊಡ್ಡ ಸಮಸ್ಯೆ ಅಂತ ಹೇಳ್ತಿಲ್ಲ. ಒಂದೇ ಒಂದು ಸಮಸ್ಯೆ ಅಂದರೆ ಅದು ನನ್ನ ಆರೋಗ್ಯ ವಿಚಾರ. ನನಗೆ ಬೆನ್ನು ನೋವು ಇದೆ. ತುಂಬಾ ಹೊತ್ತು ನಿಂತುಕೊಳ್ಳಲು ಆಗಲ್ಲ. ಹಾಗಾಗಿ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ. ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕ್ಷಮೆ ಇರಲಿ ಎಂದು ಮನವಿ ಮಾಡಿದ್ದಾರೆ.
ದರ್ಶನ್ ಯಾವುದೇ ಸಿನಿಮಾ ಮಾಡುತ್ತಿಲ್ಲ ಎಂಬ ಸುದ್ದಿಗಳ ಕುರಿತಂತೆಯೂ ಸ್ಪಷ್ಟನೆ ನೀಡಿರುವ ಅವರು, ಇವುಗಳೆಲ್ಲಾ ಸುಳ್ಳು ಎಂದಿನಂತೆ ಸಿನಿಮಾ ರಂಗದಲ್ಲಿ ಬ್ಯುಜಿಯಾಗಿರುತ್ತೇನೆ. ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ದುಡ್ಡು ವಾಪಸ್ ಕೊಟ್ಟಿದ್ದೇನೆ. ನನ್ನ ಹತ್ತಿರ ಸಿನಿಮಾಗೆ ಬರುವಾಗಲೇ ಅವರಿಗೆ ಸಿಕ್ಕಾಪಟ್ಟೆ ಕಮಿಟ್‌ಮೆಂಟ್ ಇತ್ತು. ಹಾಗಾಗಿ ವಾಪಸ್ ಕೊಟ್ಟೆ. ಮುಂದೆ ನಾವಿಬ್ಬರೂ ಸಿನಿಮಾ ಮಾಡೇ ಮಾಡ್ತೀವಿ ಎಂದಿದ್ದಾರೆ.
ಅದಷ್ಟೇ ಅಲ್ಲ, ಮುಂದೆ ನಾನು ಪ್ರೇಮ್ ಒಟ್ಟಾಗಿ ಸಿನಿಮಾ ಮಾಡೇ ಮಾಡುತ್ತೇವೆ. ನನ್ನ ಗುರುಗಳು, ನನ್ನ ಪ್ರೀತಿಯ ಸ್ನೇಹಿತೆಯ ಆಸೆ ಅದು. ಕೆವಿಎನ್ ಪ್ರೊಡಕ್ಷನ್‌ನವರು ಅವರು ಬೇರೆ ಸಿನಿಮಾ ಮಾಡ್ತಿದ್ದಾರೆ. ಮತ್ತೊಂದು ಪ್ರೊಡಕ್ಷನ್ ಅಂದಾಗ ಅವರಿಗೂ ಕಷ್ಟ ಆಗುತ್ತೆ. ಅದಕ್ಕೆ ಯಾರು ಯಾವುದೇ ಪ್ರೊಡಕ್ಷನ್ ಇಲ್ಲದೇ ಸುಮ್ಮನೆ ಇರತಾರಲ್ಲ ಅವರಿಗೆ ಅವಕಾಶ ಕೊಡೋಣ ಅಂತ ಎಂದಿದ್ದಾರೆ.
ನಿಮ್ಮ ಪ್ರೀತಿ, ಅಭಿಮಾನ, ಪ್ರೋತ್ಸಾಹ ನನ್ನ ಮೇಲೆ ಇರೋದಕ್ಕೆ ಯಾವಾಗಲೂ ಚಿರಋಣಿಯಾಗಿರುತ್ತೇನೆ. ಇದನ್ನು ನಾನೆಂದೂ ತೀರಿಸೋಕೆ ಆಗಲ್ಲ ಎಂದಿದ್ದಾರೆ.
ಈ ವೇಳೆ, ನಾನು 3 ಜನರಿಗೆ ಥ್ಯಾಂಕ್ಸ್ ಹೇಳಬೇಕು. ಧನ್ವೀರ್ ಯಾವಾಗಲೂ ಪಾಪ ನನ್ನ ಜೊತೆಯಲಿಯೇ ಇರುತ್ತಿದ್ದರು. ನನ್ನ ದೊಡ್ಡ ಬೆಂಬಲವಾಗಿ ನಿಂತರು. ‘ಬುಲ್ ಬುಲ್’ ರಚಿತಾ ರಾಮ್‌ಗೂ ಥ್ಯಾಂಕ್ಯೂ. ನನ್ನ ಪ್ರಾಣ ಸ್ನೇಹಿತೆ ಆಗಿರುವ ರಕ್ಷಿತಾಗೂ ಥ್ಯಾಂಕ್ಸ್. ನನ್ನ ಎಲ್ಲಾ ಸೆಲೆಬ್ರಿಟಿಗಳಿಗೂ ಧನ್ಯವಾದಗಳು ಎಂದಿದ್ದಾರೆ.


