ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

2 years ago

ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ  ಸಿಲುಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ನೂ ಕೆಲವು ದಿನಗಳ ಕಾಲ ಜೈಲಿನಲ್ಲೇ ಇರಬೇಕಾಗಿದೆ. 

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಗೆ ನಿರಾಶೆಯಾಗಿದೆ. ಇವರ  ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಾಧೀಶರಾದ ಜೈಶಂಕರ್ ಅವರು ವಾದ-ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದರು. ಪ್ರಕರಣದ ಪೈಕಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Leave a Reply