ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆರೆಯಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಅಷ್ಟೇ ಅಲ್ಲ ಜೈಲು ಅಧೀಕ್ಷಕ ಸೇರಿ ಒಂಬತ್ತು ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜೊತೆಗೆ ಹಿರಿಯ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ ಹೊರಡಿಸಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪರಪ್ಪನ ಅಗ್ರಹಾರ ಜೈಲಲ್ಲಿರುವ ನಟ ದರ್ಶನ್‌ಗೆ ರಾಜಾತಿಥ್ಯ ದೊರೆಯುತ್ತಿರುವ ಫೋಟೋ, ವಿಡಿಯೋ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ, ಜೈಲಿನ ಚೀಫ್ ಸೂಪರಿಡೆಂಟ್ ಶೇಷಮೂರ್ತಿ, ಸೂಪರಿಂಟ್‌ಡೆಂಟ್ ಮಲ್ಲಿಕಾರ್ಜುನ್ ಸ್ವಾಮಿ ಸೇರಿ ಒಂಬತ್ತು ಅಧಿಕಾರಿಗಳನ್ನು ಅಮಾನತು ಮಾಡಿದೆ.
ಜೊತೆಗೆ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಬಗ್ಗೆ ಆಂತರಿಕ ತನಿಖೆ ನಡೆಸುವ ಜೊತೆಗೆ ನಟನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ರಾಜ್ಯದ ಬೇರೆ ಜೈಲಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲು ಗೃಹ ಸಚಿವ ಪರಮೇಶ್ವರ್ ಸೂಚನೆ ನೀಡಿದ್ದಾರೆ.
ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿರುವುದು ಬಯಲಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬಂಧೀಖಾನೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಮತ್ತು ಇತರ ಹಿರಿಯ ಅಧಿಕಾರಿಗಳು ಭೇಟಿ ನಟ ಪರಿಶೀಲನೆ ನಡೆಸಿದರು.
ದರ್ಶನ್ ರಾಜಾತಿಥ್ಯದ ವಿವರ ಪಡೆದು, ಜೈಲಿನ ನಿಯಮ ಉಲ್ಲಂಘಿಸಿದ ಜೈಲಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ ಎಂದು ಸೂಚಿಸಿದ್ದಾರೆ.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಡಾ ಜಿ ಪರಮೇಶ್ವರ್, ನಟ ದರ್ಶನ್ ಗೆ ರಾಜಾತಿಥ್ಯದ ಸಂಬಂಧ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಘಟನೆಯ ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದರು.
ರಾಜ್ಯದ ಎಲ್ಲಾ ಬಂಧಿಖಾನೆಗಳಲ್ಲಿ ಸಿಸಿಟಿವಿ ಹಾಕಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಘಟನೆ ಹಿನ್ನೆಲೆಯಲ್ಲಿ ಜೈಲರ್ ಗಳಾದ ಶರಣಬಸವ ಅಮೀನ್ಗಢ, ಖಂಡೇವಾಲ್, ಸಹಾಯಕ ಜೈಲರ್ ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ಜೈಲಿನ ಹೆಡ್ ವಾರ್ಡರ್ ಗಳಾದ ವೆಂಕಪ್ಪ, ಸಂಪತ್, ಬಸಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದರು.




