ಬಳ್ಳಾರಿ: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರಿಗೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಹಲವು ಸಮಸ್ಯೆಗಳು ಉಂಟಾಗಿವೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸುಡು ಬಿಸಿಲ ನಾಡಿನ ಈ ಜೈಲಿನ ವಾತಾವರಣ ಸರಿಹೊಂದದೇ ದರ್ಶನ್ ನಿರಂತರವಾಗಿ ಸೊರಗುತ್ತಾ ಸಾಕಷ್ಟು ನೋವು ಅನುಭವಿಸಿದ್ದಾರೆ. ಜೈಲಿನ ನಿಯಮಗಳ ಕಾರಣದಿಂದಾಗಿ ಇದೀಗ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್ ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ.
ಆದರೆ, ದರ್ಶನ್ ಅವರು ಸ್ಕ್ಯಾನ್ ಮಾಡಿಸುವುದಕ್ಕೆ ಸಿದ್ದರಿಲ್ಲ. ನಾನು ಬೆಂಗಳೂರಿಗೆ ಹೋದ ಬಳಿಕ ಸ್ಕ್ಯಾನ್ ಮಾಡಿಸಿಕೊಳ್ಳುವೆ. ಸದ್ಯಕ್ಕೆ ನೋವು ನಿವಾರಕ ಮಾತ್ರೆ ಕೊಡಿ ಸಾಕು ಎಂದು ದರ್ಶನ್ ಕೋರಿಕೊಂಡಿದ್ದಾರೆ.
ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ದರ್ಶನ್ ಅವರು ಜಾಮೀನು ಸಿಗಲಿದೆ ಎನ್ನುವ ಭರವಸೆಯಲ್ಲಿದ್ದಾರೆ. ಈ ವಿಚಾರದಲ್ಲಿ ಕೋರ್ಟ್ ಯಾವ ರೀತಿಯ ಆದೇಶ ಹೊರಡಿಸುತ್ತದೆ ಎಂದು ಕಾದು ನೋಡಬೇಕಿದೆ.
ಜಾಮೀನು ಅರ್ಜಿ ವಿಚಾರಣೆ ಈಗಾಗಲೇ ಎರಡು ಬಾರಿ ಮುಂದಕ್ಕೆ ಹೋಗಿದೆ. ದರ್ಶನ್ ಪರ ವಕೀಲರು ವಾದ ಮಂಡನೆಗೆ ಹೆಚ್ಚಿನ ಸಮಯ ಕೇಳುತ್ತಿದ್ದಾರೆ. ಈ ಕಾರಣದಿಂದ ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ.
ಇತ್ತೀಚೆಗೆ ‘ಡೆವಿಲ್’ ಸಿನಿಮಾ ನಿರ್ಮಾಪಕರು ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಸಿನಿಮಾಗೆ ಸಂಬಂಧಿಸಿದ ಕೆಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ದರ್ಶನ್ ಜೈಲಿನಲ್ಲಿ ಇರುವುದರಿಂದ ಸಿನಿಮಾದ ಕೆಲಸಕ್ಕೆ ತಡೆಬಿದ್ದಿದೆ.




