ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ತನಿಖೆ ವೇಳೆ ಪೊಲೀಸರು ತಮ್ಮಿಂದ ವಶಪಡಿಸಿಕೊಂಡ ದೊಡ್ಡ ಮೊತ್ತದ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನದ ಬಳಿಕ ಅವರಿಂದ ಬರೋಬ್ಬರಿ 37 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಹಣವನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಬಳಸಲಾಗಿತ್ತು ಎಂದು ಪೊಲೀಸರು ಆರೋಪ ಮಾಡಿದ್ದರು.
ರೇಣುಕಾಸ್ವಾಮಿ ಕೊಲೆಯನ್ನು ತಾವು ಮಾಡಿದ್ದಾಗಿ ಒಪ್ಪಿಕೊಳ್ಳಲು ಹೊರಗಡೆಯಿಂದ ಕರೆಸಲಾಗಿದ್ದ ಮೂವರಿಗೆ ಅದಾಗಲೇ ಒಂದಿಷ್ಟು ಹಣವನ್ನು ಸಹ ನೀಡಲಾಗಿತ್ತು. ಹಣ ವಶಪಡಿಸಿಕೊಂಡಿದ್ದ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು.
ಆದರೆ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು, ವಶಪಡಿಸಿಕೊಂಡ ಹಣ, ಸಾಲವಾಗಿ ನೀಡಲಾಗಿದ್ದ ಹಣ ಎಂದು ವಾದಿಸಿದ್ದರು. ಮೋಹನ್ ರಾಜ್ ಎಂಬುವರಿಗೆ ಸಾಲದ ರೂಪದಲ್ಲಿ ನಟ ದರ್ಶನ್ ಹಣ ನೀಡಿದ್ದರು. ಆ ಹಣವನ್ನು ಮೋಹನ್ ರಾಜ್, ದರ್ಶನ್ ಗೆ ಮರಳಿಸಿದ್ದರು. ಆ ಹಣವನ್ನು ದರ್ಶನ್ ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು. ಆ ಹಣ ಕೊಲೆ ಮುಚ್ಚಿಹಾಕಲು ಬಳಸಲೆಂದು ಇರಿಸಿಕೊಂಡಿದ್ದ ಹಣ ಅಲ್ಲ ಎಂದು ವಾದ ಮಾಡಿದ್ದರು.
ಇದೀಗ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ದರ್ಶನ್, ತಮ್ಮ ಹಣವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿದ್ದಾರೆ. ನ್ಯಾಯಾಲಯ ಆದಾಯ ತೆರಿಗೆ ಇಲಾಖೆಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಒಂದೊಮ್ಮೆ ಪೊಲೀಸರು ಅಥವಾ ಆದಾಯ ತೆರಿಗೆ ಇಲಾಖೆ ಆಕ್ಷೇಪಣೆ ಸಲ್ಲಿಸಿದಲ್ಲಿ ಮತ್ತೊಂದು ಸುತ್ತು ವಾದ, ವಿಚಾರಣೆಗಳು ನಡೆದ ಬಳಿಕ ಆ ಹಣ ದರ್ಶನ್ ಗೆ ಸೇರಲಿದೆಯೇ ಅಥವಾ ಪೊಲೀಸರ ಬಳಿ ಸಾಕ್ಷಿಯಾಗಿಯೇ ಉಳಿದುಕೊಳ್ಳಲಿದೆಯೇ ತಿಳಿಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಗೆ ಕಳೆದ ತಿಂಗಳು ನಿಯಮಿತ ಜಾಮೀನು ದೊರೆತಿದೆ. ದರ್ಶನ್ ಗೆ ಜೊತೆಗೆ ಪ್ರಕರಣದ ಎಲ್ಲ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ.




