ಬೆಂಗಳೂರು: ರೈತರಿಗೆ ಮತ್ತು ಸ್ಥಳೀಯ ನಾಗರಿಕರಿಗೆ ಅನುಕೂಲ ಆಗುವಂತೆ ಬೃಂದಾವನ (ಕೆ ಆರ್ ಎಸ್) ಟೋಲ್ ಅನ್ನು ವರ್ಗಾಯಿಸುವಂತೆ ಸದನದಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮನವಿ ಮಾಡಿದರು.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆ ಅಡಿಯಲ್ಲಿ ಮಾತನಾಡಿದ ಅವರು, ರೈತರು ಮತ್ತು ಸ್ಥಳೀಯ ನಾಗರಿಕರು ಬೃಂದಾವನ ಮಾರ್ಗದಲ್ಲಿ ತೆರಳುವ ವೇಳೆ ಟೋಲ್ ಭರಿಸಬೇಕಾಗುತ್ತದೆ. ಇದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದರು. ದರ್ಶನ್ ಪುಟ್ಟಣ್ಣಯ್ಯ ಅವರ ಮನವಿಯನ್ನು ಪರಿಗಣಿಸುವಂತೆ ಭರವಸೆ ನೀಡಿದರು.




