ಸಮಯಬದ್ಧ ಮೇಲ್ವಿಚಾರಣೆಗೆ ಮಾಡಲು ಡ್ಯಾಷ್ ಬೋರ್ಡ್

2 years ago

#Dashboard #timely #monitoring #Siddaramaiah

ಬೆಂಗಳೂರು: ಅಭಿವೃದ್ಧಿ ಯೋಜನೆಗಳ ಕುರಿತಂತೆ ಆಯವ್ಯಯದಲ್ಲಿ ಕೈಗೊಂಡ ಎಲ್ಲಾ ಇಲಾಖೆಗಳ 1 ಕೋಟಿ ರೂ.ಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ಧವಾಗಿ ಮೇಲ್ವಿಚಾರಣೆ ಮಾಡಲು ರಾಜ್ಯ ಸರ್ಕಾರ ಡ್ಯಾಷ್ ಬೋರ್ಡ್ ಒಂದನ್ನು ಸಿದ್ಧಪಡಿಸಿದೆ.

ಸಿಎಂ ಸಿದ್ದರಾಮಯ್ಯ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಫೋರ್ಟಲ್ 2.0 ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಮಾಡ್ಯೂಲ್‍ನಲ್ಲಿ ಡ್ಯಾಷ್‍ಬೋರ್ಡ್‍ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ಧಪಡಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ 50 ಲಕ್ಷ ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲಾ ಟೆಂಡರ್‍‌ ಗಳಿಗೆ ಮೂರು ತಿಂಗಳ ಅವಧಿಗೆ ಪ್ರಾಯೋಗಿಕ ಆಧಾರದ ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‍ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‍ ಆನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲು ಇದನ್ನು ಜಾರಿಗೆ ತರಲಾಗಿದೆ.

ಅದರ ಪ್ರಕಾರ ಇ-ಪ್ರೊಕ್ಯೂರ್‍ಮೆಂಟ್ ವೇದಿಕೆಯಲ್ಲಿ ಒಟ್ಟು 40,000 ಟೆಂಡರ್ ಗಳು ಪ್ರಕಟಿಸಲಾಗಿದ್ದು ಈ ಪೈಕಿ ಆಯ್ಕೆಯಾದ 3 ಇಲಾಖೆಗಳ ರೂ 50 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಕೇವಲ 3165 ಟೆಂಡರ್ ಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ. ಸದರಿ ಇಲಾಖೆಗಳಿಂದ ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್ ದಲ್ಲಿ ಕಡ್ಡಾಯವಾಗಿ ತಂತ್ರಾಂಶದ ಮೂಲಕ ಮಾಹಿತಿಯನ್ನು ಡ್ಯಾಶ್ ಬೋರ್ಡ್ ದಲ್ಲಿ ಅಳವಡಿಸಲಾಗುತ್ತದೆ.

ಸಿದ್ದರಾಮಯ್ಯ ಕಳೆದ ಸೆಪ್ಟಂಬರ್ 12- 13ರಂದು ನಡೆದ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನದಲ್ಲಿ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ, 28 ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿ ಪ್ರತಿ ತಿಂಗಳೂ ವರದಿಯನ್ನು ಸಲ್ಲಿಸಲು ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದರು. ಅಭಿವೃದ್ಧಿ ಆಯುಕ್ತರಿಗೆ ಸದರಿ ವರದಿಗಳನ್ನು ವಿಶ್ಲೇಷಿಸಿ ಮಂಡಿಸುವಂತೆ ಸೂಚಿಸಲಾಗಿತ್ತು. ಅದರಂತೆ, ಕ್ರಮ ವಹಿಸಿ, ಇ-ಆಡಳಿತ ಇಲಾಖೆಯಿಂದ ಡಿಐಎಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.

ಈ ತಂತ್ರಾಂಶದ ಮೂಲಕ ಎಲ್ಲಾ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ಆನ್‍ಲೈನ್ ವರದಿಯನ್ನು ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇತರೆ ಇಲಾಖಾ ಕಾರ್ಯದರ್ಶಿಗಳಿಗೆ ಹಾಗೂ ಜಿಲ್ಲಾಧಿಕಾರಿ /ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಮಾಹಿತಿ ದಾಖಲಿಸಬಹುದು. ಸದರಿ ಸಮಸ್ಯೆಗಳಿಗೆ ಇಲಾಖಾ ಕಾರ್ಯದರ್ಶಿ/ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ತಂತ್ರಾಂಶದ ಮೂಲಕವೇ ತೆಗೆದುಕೊಂಡ ಕ್ರಮದ ಕುರಿತು ವರದಿ ಸಲ್ಲಿಸಬಹುದಾಗಿದೆ. ಸಲ್ಲಿಸಲಾಗಿರುವ ಜಿಲ್ಲಾ ವರದಿಗಳ ಕುರಿತ ಎಮ್‍ಐಎಸ್ ವರದಿಗಳನ್ನು ಮುಂತ್ರಿಗಳು ಈ ತಂತ್ರಾಂಶದಲ್ಲಿ ವೀಕ್ಷಿಸಬಹುದು.

Leave a Reply