ಬೆಂಗಳೂರು: ಲೋಕಸಭೆ ಚುನಾವಣೆ ಜೊತೆಯಲ್ಲೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೂಡ ದಿನಾಂಕ ನಿಗದಿಯಾಗಿದೆ. ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ 26 ವಿಧಾನಸಭಾ ಕ್ಷೇತ್ರಗಳಿಗೂ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಚುನಾವಣೆ ನಡೆಸುವುದಾಗಿ ಘೋಷಿಸಿದರು.
ಉಪಚುನಾವಣೆಗೆ ಮಹತ್ವದ ದಿನಗಳು:
ಏಪ್ರಿಲ್ 12 – ಅಧಿಸೂಚನೆ ಪ್ರಕಟ
ಏಪ್ರಿಲ್ 12 – ನಾಮಪತ್ರ ಸಲ್ಲಿಕೆ ಆರಂಭ
ಏಪ್ರಿಲ್ 19 – ನಾಮಪತ್ರ ಸಲ್ಲಿಸಲು ಕಡೆಯ ದಿನ
ಏಪ್ರಿಲ್ 20 – ನಾಮಪತ್ರಗಳ ಪರಿಶೀಲನೆ
ಏಪ್ರಿಲ್ 22 – ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನ
ಮೇ 7 – ಮತದಾನ
ಜೂನ್ 4 – ಫಲಿತಾಂಶ




