ಚಿಕ್ಕಮಗಳೂರು: ಬಾಬಾ ಬುಡನ್ ಗಿರಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠವನ್ನು ಸಂಪೂರ್ಣ ಹಿಂದೂ ಪೀಠ ಎಂದು ಘೋಷಿಸುವಂತೆ ಆಗ್ರಹಿಸುವ ಗುರಿಯೊಂದಿಗೆ ಈ ಬಾರಿ ದತ್ತಮಾಲ ಅಭಿಯಾನ ನಡೆಯುತ್ತಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯುತ್ತಿರುವ 25ನೇ ವರ್ಷದ ದತ್ತಜಯಂತಿ ಅಂಗವಾಗಿ ದತ್ತಮಾಲ ಆಚರಣೆಗೆ ಚಾಲನೆ ದೊರೆತಿದೆ. ಇದಕ್ಕಾಗಿ ಚಿಕ್ಕಮಗಳೂರು ನಗರ, ಪಟ್ಟಣಗಳಲ್ಲಿ ಕೇಸರಿ ಬಾವುಟ ಮತ್ತು ಬಂಟಿಂಗ್ಸ್ ಕಟ್ಟಲಾಗಿದ್ದು ಇಡೀ ನಗರ ಕೇಸರಿಮಯವಾಗಿದೆ. ಈ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ.
ಅಭಿಯಾನದ ಹಿನ್ನೆಲೆಯಲ್ಲಿ ಭಜರಂಗದಳ, ವಿ ಎಚ್ ಪಿ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಡಿ. 6ರಂದು ರಾಜ್ಯದಾದ್ಯಂತ ದತ್ತಮಾಲೆ ಧಾರಣೆ ಮಾಡಿ ಚಿಕ್ಕಮಗಳೂರಿನತ್ತ ಧಾವಿಸುತ್ತಾರೆ.
ಚಿಕ್ಕಮಗಳೂರಿನಲ್ಲಿ ಡಿ.12 ರಂದು ಅನಸೂಯಾ ಜಯಂತಿ ಮಹಿಳೆಯರಿಂದ ಸಂಕೀರ್ತನ ಯಾತ್ರೆ ನಡೆಯಲಿದೆ. ಡಿ. 13ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನೆರವೇರುತ್ತದೆ. ನಂತರ ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳು ಗುಹೆಯಲ್ಲಿನ ದತ್ತ ಪಾದುಕೆ ದರ್ಶನ ಪಡೆಯುತ್ತಾರೆ. ಈ ದಿನ ರಾಜ್ಯದ ಮೂಲೆಗಳಿಂದ ಸಾವಿರಾರು ದತ್ತಮಾಲಾಧಾರಿಗಳು ಇಲ್ಲಿಗೆ ಆಗಮಿಸುತ್ತಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಗೋರಿಗಳಿಲ್ಲ. ಇದು ಹಿಂದೂಗಳ ಪವಿತ್ರ ದತ್ತಪೀಠ ಎಂದು ಹಿಂದುತ್ವ ಪರ ವಾದಿಗಳು ವಾದ ಮಂಡಿಸಿದರೆ, ಮುಸ್ಲೀಮರು ಬಾಬಾ ಬುಡನ್ ಜೊತೆ ದಾದಾಹಯಾತ್ ಖಲಂದರ್ ಸೇರಿದಂತೆ ಅವರ ಶಿಷ್ಯರ ಗೋರಿಗಳಿರುವ ಪವಿತ್ರ ಸ್ಥಳ ಎನ್ನುತ್ತಿದ್ದಾರೆ.
ಹಿಂದೂ-ಮುಸ್ಲಿಂ ನಡುವಿನ ದೇವರ ಹೆಸರಿನ ವಿವಾದ 25 ವರ್ಷಗಳಿಂದ ಜೀವಂತವಾಗಿದೆ. ಇದೇ ವಿಷಯವನ್ನು ಪ್ರಮುಖ ವಿಷಯವಾಗಿಟ್ಟುಕೊಂಡು ರಾಜಕೀಯ ಅಖಾಡಕ್ಕೆ ಇಳಿದಿದ್ದ ಸಿ ಟಿ ರವಿ ಶಾಸಕರಾಗಿ, ಸಚಿವರಾಗಿ ಅಧಿಕಾರ ಅನುಭವಿಸಿದರು. 3004ರಿಂದ 2023ರವರೆಗೆ ಚಿಕ್ಕಮಗಳೂರು ಶಾಸಕರಾಗಿದ್ದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಏರಿದರು. ಆದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಎಚ್ ಡಿ ತಮ್ಮಯ್ಯ ಅವರ ವಿರುದ್ಧ 5926 ಮತಗಳ ಅಂತರದಿಂದ ಸೋತಿದ್ದಾರೆ.




