ದಾವಣಗೆರೆ: ದಾವಣಗೆರೆ ಜಿಲ್ಲೆಯ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ ಶಾಲೆಗಳಲ್ಲಿ ಸುಮಾರು 1004 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಿ 963 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಈ ವಸತಿ ಶಾಲೆಗಳಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇ.95.92ರಷ್ಟು ಫಲಿತಾಂಶ ದಾಖಲಿಸಿರುತ್ತಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಶೇ.100 ರಷ್ಟು ಫಲಿತಾಂಶ ಪಡೆದ ವಸತಿ ಶಾಲೆಗಳು: ಮೊರಾರ್ಜಿ ದೇಸಾಯಿ ವಸತಿ ಶಾಲೆ (ಹಿಂ.ವರ್ಗ) ಮಾದನಬಾವಿ, ಹೊನ್ನಾಳಿ ತಾಲ್ಲೂಕು, ಮೊರಾರ್ಜಿ ದೇಸಾಯಿ ವಸತಿ ಶಾಲೆ (ಹಿಂ.ವರ್ಗ) ಮುಗ್ಗಿದರಾಗಿಹಳ್ಳಿ, ಜಗಳೂರು ತಾಲ್ಲೂಕು, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ (ಪ.ಜಾತಿ) ಎಚ್.ಕಡೆದಕಟ್ಟೆ, ಹೊನ್ನಾಳಿ ತಾಲ್ಲೂಕು, ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ವರ್ಗ) ವಡೇರಹಳ್ಳಿ, ದಾವಣಗೆರೆ ತಾಲ್ಲೂಕು, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ (ಪ.ವರ್ಗ) ಉದ್ದಘಟ್ಟ, ಜಗಳೂರು ತಾಲ್ಲೂಕು, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ (ಪ.ವರ್ಗ) ಕೊಂಡಜ್ಜಿ, ಹರಿಹರ ತಾಲ್ಲೂಕು.
600 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು: ಕು.ಜೀವಿತ.ಎಂ.ಎನ್-610, ಸ್ಪೂರ್ತಿ.ಪಿ-608, ಯಶೋಧ.ಹೆಚ್.ಬಿ-607, ಕು.ರಾಜೇಶ್ವರಿ.ಈ-602 ಅಂಕವನ್ನು ಪಡೆದಿರುತ್ತಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ.ಕೆ ತಿಳಿಸಿದ್ದಾರೆ.




