ದಾವಣಗೆರೆ: ದಾವಣಗೆರೆ ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣ ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗೆ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣ ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಹಾಜರಿದ್ದರು.




