ಧರ್ಮಸ್ಥಳ ವ್ಯಾಪ್ತಿಯ ಸಾವು ಪ್ರಕರಣಗಳು: ಎಸ್.ಐ.ಟಿ ರಚಿಸುವಂತೆ ಮಹಿಳಾ ಆಯೋಗದಿಂದ ಪತ್ರ
ಎಸ್ ಐ ಟಿ ರಚಿಸುವಂತೆ ಕೋರಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸರ್ಕಾರಕ್ಕೆ ಪತ್ರ
ಬೆಂಗಳೂರು: ಧರ್ಮಸ್ಥಳದ ಮಹಿಳೆಯರ ನಾಪತ್ತೆ ಮತ್ತು ಇತರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಎಸ್ ಐ ಟಿ ರಚಿಸುವಂತೆ ಕೋರಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ಕಳೆದ ಇಪ್ಪತ್ತು ವರ್ಷಗಳಿಂದ ನಾಪತ್ತೆಯಾದ, ಕೊಲೆಯಾದ ಮಹಿಳೆಯರ ಪ್ರಕರಣದ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದ್ದಾರೆ.
ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ)ವನ್ನು ರಚಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಸಮೂಹ ಮಾಧ್ಯಮಗಳ ವರದಿಗಳನ್ನು ಉಲ್ಲೇಖಿಸಿರುವ ಅವರು, ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.
ದಿನಾಂಕ: 12-07-2025ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.
ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿರುತ್ತಾರೆ ಎಂದಿದ್ದಾರೆ.
ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಪತ್ರ ಬರೆದಿದ್ದಾರೆ.




