ಎಲ್ಲರಿಗೂ ನಮಸ್ಕಾರ, ನಿಮಗೆಲ್ಲ ತಿಳಿದಿರುವ ಹಾಗೆ, ಹಲವು ವರ್ಷಗಳಿಂದ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಅಂತೆಯೇ ಈ ಬಾರಿಯೂ ಕೂಡ ನನ್ನ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದೇನೆ. ಪ್ರತಿವರ್ಷದಂತೆ ಈ ವರ್ಷವೂ ಸಹ ನಿಮ್ಮ ಸಹಕಾರ, ಪ್ರೀತಿ ಹಾಗೂ ತಾಳ್ಮೆ ನನ್ನೊಂದಿಗೆ ಹೀಗೇ ಇರಲಿ ಎಂದು ಕೇಳಿಕೊಳ್ಳುತ್ತೇನೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈಗಾಗಲೇ ಅನೇಕ ಆತ್ಮೀಯರು ಹುಟ್ಟುಹಬ್ಬವನ್ನು ಆಚರಿಸಲು ತಯಾರಿ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ದಯಮಾಡಿ ಇಂತಹ ಆಚರಣೆಗಳಿಗೆ ನಿಮ್ಮ ಶ್ರಮ ಹಾಕಬಾರದು ಎಂದು ಕೇಳಿಕೊಳ್ಳುತ್ತೇನೆ, ನಿಮ್ಮ ಪ್ರೀತಿ, ಹಾರೈಕೆ, ಅಭಿಮಾನವೇ ನನಗೆ ಸಮ್ಮಾನ, ಸಂಭ್ರಮ.
ನೀವು ಮಾಡಲೇಬೇಕು ಎಂದು ನಿರ್ಧರಿಸಿದ್ದರೆ, ನಿಮ್ಮ ಪರಿಶ್ರಮವು ಬಡ ಜನರಿಗೆ, ಶೋಷಿತರಿಗೆ, ಸಂಕಷ್ಟದಲ್ಲಿರುವ ಜನರಿಗೆ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ರೀತಿಯಲ್ಲಿ ಇರಲಿ ಎಂದು ನಿಮ್ಮಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ.
ನಿಮ್ಮ ಪ್ರೀತಿ ಹಾಗೂ ಅಭಿಮಾನಕ್ಕೆ ನಾನು ಹಾಗೂ ನಮ್ಮ ಕುಟುಂಬ ಸದಾ ಚಿರಋಣಿಯಾಗಿರಲಿದೆ. ಧನ್ಯವಾದಗಳು.
ಇಂತಿ ನಿಮ್ಮ
ಪ್ರಿಯಾಂಕ್ ಖರ್ಗೆ




