ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಸಚಿವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಚೆಲುವರಾಯಸ್ವಾಮಿ, ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ DK Shivakumar, Krishna Byre Gowda, Priyank Kharge ಅವರುಗಳ ಮೇಲು ಸಹ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ದೇವರಾಜೇಗೌಡ ಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನ ನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ. ಪ್ರಕರಣದ ಬಗ್ಗೆ ಎಸ್.ಐ.ಟಿ ತನಿಖೆ ನಡೆಸುತ್ತಿದ್ದು ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ ಎಂದು ಹೇಳಿದ್ದಾರೆ.




