ಸೌಜನ್ಯ ಪ್ರಕರಣ ಕುರಿತು ಕೋರ್ಟ್ ಆದೇಶ ಬಂದ ನಂತರ ನಿರ್ಧಾರ: ಡಾ.ಜಿ.ಪರಮೇಶ್ವರ್

3 years ago

Decision after court order on courtesy case: Dr. G. Parameshwar

ಬೆಂಗಳೂರು: ಬೆಳ್ತಂಗಡಿಯ ಸೌಜನ್ಯ ಪ್ರಕರಣದಲ್ಲಿ ಮರು ತನಿಖೆಗಾಗಿ ಒತ್ತಾಯಗಳು ಕೇಳಿಬರುತ್ತಿವೆ. ಪರ, ವಿರೋಧ ಚರ್ಚೆಗಳು, ಪ್ರತಿಭಟನೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇವೆ. ಆದರೆ ಸರ್ಕಾರ ಈವರೆಗೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಈ ಕುರಿತು ನ್ಯಾಯಾಲಯದ ಆದೇಶದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಕೆಲವರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ. ಅಲ್ಲಿ ಯಾವ ತೀರ್ಪು ಬರಲಿದೆ ಎಂಬುದನ್ನು ಕಾದು ನೋಡುತ್ತಿದ್ದೇವೆ. ಸರ್ಕಾರ ಒಂದು ರೀತಿ ನಿರ್ಧಾರ ತೆಗೆದುಕೊಳ್ಳುವುದು, ನ್ಯಾಯಾಲಯ ಮತ್ತೊಂದು ರೀತಿ ತೀರ್ಪು ನೀಡುವುದರಿಂದ ಗೊಂದಲಗಳಾಗಬಾರದು. ಈ ಕಾರಣಕ್ಕೆ ನಾವು ನ್ಯಾಯಾಲಯದ ಆದೇಶವನ್ನು ನಿರೀಕ್ಷಿಸುತ್ತಿದ್ದೇವೆ ಎಂದರು.

Leave a Reply