ಹಿಜಬ್ ಕುರಿತು ಪರಿಶೀಲನೆ ನಂತರ ನಿರ್ಧಾರ: ಡಾ.ಜಿ.ಪರಮೇಶ್ವರ್

2 years ago

ಬೆಂಗಳೂರು: ರಾಜ್ಯದ್ಯಾಂತ ತೀವ್ರ ವಿವಾದ ಸೃಷ್ಟಿಸಿರುವ ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಕುರಿತು ಎಲ್ಲಾ ರೀತಿಯ ವಿಷಯಗಳನ್ನು ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಈ ವಿಷಯದಲ್ಲಿ ಯಾವುದೇ ಆತುರವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟೀಕರಣ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಈ ವಿಷಯಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ. ಆದರೆ ಅದು ಕೆಲಸ ಮಾಡುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಮತ್ತೊಂದೆಡೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಹಿಜಾಬ್ ವಿಷಯವನ್ನು ಅನಗತ್ಯವಾಗಿ ದೊಡ್ಡದು ಮಾಡಲಾಗಿದೆ. ಆ ಕುರಿತಂತೆ ನಾವಿನ್ನೂ ಯೋಜನೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಯವರು ಅದಿನ್ನೂ ಚರ್ಚೆಗೆ ಬರುತ್ತಿದೆ, ಚರ್ಚೆ ಮಾಡಿದ್ದಾರೆ ಎಂದಿದ್ದಾರೆ. ಅದು ಇನ್ನೂ ಎಲ್ಲಿದೆ ಎಂದು ಗೊತ್ತಿಲ್ಲ ಎಂದರು.

Leave a Reply