ವ್ಯಸನ ಮುಕ್ತ ದಿನಾಚರಣೆ
ಆಗಸ್ಟ್ 1 ರಂದು ಡಾ; ಮಹಾಂತ ಶಿವಯೋಗಿಗಳ ಜನ್ಮ ದಿನ
ದಾವಣಗೆರೆ: ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ಆಗಸ್ಟ್ 1 ರಂದು ವ್ಯಸನ ಮುಕ್ತ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ವ್ಯಸನ ಮುಕ್ತ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನವನ್ನಾಗಿ ಸರ್ಕಾರ ಆಚರಣೆ ಮಾಡುತ್ತಿದೆ. ಇದರ ಅಂಗವಾಗಿ ಯುವ ಜನಾಂಗದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳಿಂದುಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ ಎಂದರು.
ಆಗಸ್ಟ್ ತಿಂಗಳಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮದ್ಯ ಹಾಗೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಲು ವಿಚಾರ ಸಂಕಿರಣ ಕಾರ್ಯಕ್ರಮ, ಭಾಷಣ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆಯಿಂದ ಆಯೋಜಿಸುವ ಮೂಲಕ ಜಾಗೃತಿ ಕೈಗೊಳ್ಳಬೇಕು. ಮತ್ತು ಮದ್ಯ ವರ್ಜನ ಶಿಬಿರವನ್ನು ರಾಮನಗರದಲ್ಲಿನ ಗಾಂಧಿ ಭವನದಲ್ಲಿ ಏರ್ಪಡಿಸಲು ತಿಳಿಸಿದರು.
ಆಗಸ್ಟ್ 1 ರಂದು ಬೆಳಗ್ಗೆ 11 ಗಂಟೆಗೆ ವ್ಯಸನ ದಿನದ ಅಂಗವಾಗಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.




