ಬೆಂಗಳೂರು: ಅಬಕಾರಿ ಅಧಿಕಾರಿಗಳ ಕಿರುಕುಳ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರಾಟ ಸ್ಥಗಿತ ಮಾಡುವ ಮೂಲಕ ಮುಷ್ಕರಕ್ಕೆ ಕರೆ ನೀಡಿದ ಮಧ್ಯ ಮಾರಾಟಗಾರರು ನಿರ್ಧಾರ ವಾಪಸ್ ಪಡೆದಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ತಮ್ಮ ಬೇಡಿಕೆಗಳ ಕುರಿತು ಮಧ್ಯ ಮಾರಾಟಗಾರರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ಯಶಸ್ವಿಯಾಗಿದ್ದು ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್ ಪಡೆಯಲಾಗಿದೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮದ್ಯ ಮಾರಾಟಗಾರರು, ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಘೋಷಿಸಿದರು.
ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೀಗಾಗಿ ಅವರು ಕೈಗೊಂಡ ಕ್ರಮಕ್ಕೆ ನಾವು ಸಮ್ಮತಿ ವ್ಯಕ್ತಪಡಿಸಿದ್ದು, ಮುಷ್ಕರದಿಂದ ಹಿಂದೆ ಸರಿದಿದ್ದೇವೆ ಎಂದರು.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೊರಲಿನಿಂದ ಸ್ಪಷ್ಟಪಡಿಸಿದರು.




