ಬೆಂಗಳೂರು: ರಾಜ್ಯದಲ್ಲೇ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ಎರಡು ಅಥವಾ ಮೂರು ಜಿಲ್ಲೆ ಮಾಡಬೇಕು ಎಂಬ ಬೇಡಿಕೆ ತೀವ್ರಗೊಂಡಿರುವ ನೂತನ ಜಿಲ್ಲಾ ಕೇಂದ್ರದ ಕುರಿತು ಹಲವು ಬೇಡಿಕೆಗಳು ಕೇಳಿಬರುತ್ತಿವೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇದೀಗ ಜಿಲ್ಲಾ ಕೂಗಿನ ಸಾಲಿಗೆ ಅಥಣಿ ಸೇರಿಕೊಂಡಿದೆ. ಬೆಳಗಾವಿ ಜಿಲ್ಲೆಯಲ್ಲಿ ಅತಿದೊಡ್ಡ ಪಟ್ಟಣವಾಗಿರುವ ಅಥಣಿಯನ್ನು ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ವಿಧಾನಪರಿಷತ್ ನಲ್ಲಿ ಒತ್ತಾಯಿಸಿದರು.
2025-26ನೇ ಸಾಲಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಥಣಿ ಗಡಿಭಾಗದ ಜನ ತಮ್ಮ ಕೆಲಸ ಕಾರ್ಯಗಳಿಗೆ 190 ಕಿಲೋಮೀಟರ್ ದೂರದ ಜಿಲ್ಲಾ ಕೇಂದ್ರ ಬೆಳಗಾವಿ ಬರಬೇಕಾಗಿದೆ ಎಂದು ಸದನದ ಗಮನಕ್ಕೆ ತಂದರು.
ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಲು ಅಥಣಿ ಸೂಕ್ತ ಪಟ್ಟಣವಾಗಿದೆ. ಅಥಣಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವುದರಿಂದ ಆಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಅಥಣಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಆಭಾಗದ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.




