ದಾವಣಗೆರೆ: ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ, ಗುಂಪು ಉದ್ಯಮ ಕೈಗೊಳ್ಳಲು, ಎಸ್.ಹೆಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಸಾಲ ಪಡೆಯಲು, ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಕಾರ್ಯಕ್ರಮದಡಿ ವಿವಿಧ ತರಬೇತಿಯನ್ನು ಪಡೆಯಲು, ಮಹಿಳಾ ಸ್ವ ಸಹಾಯ ಸಂಘಗಳನ್ನು ರಚಿಸಲು, ವಿಕಲಚೇತನ ಪುರುಷರ ಸ್ವ ಸಹಾಯ ಸಂಘಗಳನ್ನು ರಚಿಸಲು, ಬೀದಿ ಬದಿ ವ್ಯಾಪಾರಿಗಳ ಸ್ವ ಸಹಾಯ ಸಂಘಗಳನ್ನು ರಚಿಸಲು ಆಸಕ್ತ ಅರ್ಹ ಫಲಾನುಭವಿಗಳಿಂದ, ಗುಂಪುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಟಿಪ್ಪು ಸುಲ್ತಾನ್ ಶಹೀದ್ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಪ್ರದಾನ
- ಕನ್ನಡ ಪತ್ರಿಕೋದ್ಯಮಕ್ಕೆ ಮತ್ತೊಂದು ಹೊಸ ಗರಿ
- ರಾಜಕೀಯ, ಸಾಮಾಜಿಕ, ಆರ್ಥಿಕ ಬದುಕು ಕಟ್ಟಿಕೊಟ್ಟ ಕಾಂಗ್ರೆಸ್ ಹಿಂದೂ ವಿರೋಧಿ!
- ಪುಟ್ಟ ‘ಒಡೆಯ’ನನ್ನು ಪರಿಚಯಿಸಿದ ಡಾಲಿ ಧನಂಜಯ
- ಸತೀಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಹೊರಗಿಡಬೇಕು: ಆರ್ ಅಶೋಕ್
ನಿಗದಿತ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಜುಲೈ 12 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ಫಲಾನುಭವಿಗಳು ಹರಿಹರ ನಗರದ ನಿವಾಸಿಗಳಾಗಿರಬೇಕು, ಬಡತನ ರೇಖೆ ಕೆಳಗಿನ ಕುಟುಂಬದವರಾಗಿರಬೇಕು ಹಾಗೂ ಅರ್ಜಿಯೊಂದಿಗೆ ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ, ಹುಟ್ಟಿದ ತಾರೀಖು ದೃಢೀಕರಣ ಪತ್ರ ಲಗತ್ತಿಸಿ, ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬೇಕು ಎಂದು ನಗರಸಭೆ ಪೌರಾಯುಕ್ತ ಬಸವರಾಜ ತಿಳಿಸಿದ್ದಾರೆ.




