ಮೈತ್ರಿಕೂಟಕ್ಕೆ ಬಿಸಿಮುಟ್ಟಿಸಿದ ಸೈನಿಕ ಸಿ.ಪಿ.ಯೋಗೇಶ್ವರ್
ರಾಮನಗರ \ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಮೂರಕ್ಕೆ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ವಿಜಯ ಸಾಧಿಸುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಭಾರಿ ಮುಖಭಂಗ ಮಾಡಿದೆ.
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಜಯ ಗಳಿಸಿದ್ದಾರೆ. ಕಳೆದೆರೆಡು ಚುನಾವಣೆಗಳಲ್ಲಿಯೂ ಸೋಲುಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಸತತ ಮೂರನೇ ಭಾರಿ ಸೋಲೊಪ್ಪಿಕೊಳ್ಳುವ ಮೂಲಕ ಹ್ಯಾಟ್ರಿಕ್ ಮುಖಭಂಗದ ಮುಜುಗರಕ್ಕೆ ಗುರಿಯಾದರು.
ಸತತ ಮೂರನೇ ಸೋಲು ತಪ್ಪಿಸಿಕೊಂಡ ಸಿ ಪಿ ಯೋಗೇಶ್ವರ್, ಇದೇ ಮೊದಲ ಬಾರಿಗೆ ಒಂದು ಲಕ್ಷ ಮತಗಳನ್ನು ಪಡೆದುಕೊಂಡು ಹೊಸ ದಾಖಲೆ ಬರೆದುಕೊಂಡರು. ಯೋಗೇಶ್ವರ್ 1,12,642 ಮತಗಳನ್ನು ಪಡೆದರೆ, ನಿಖಿಲ್ ಕುಮಾರಸ್ವಾಮಿ ಅವರು 87,229 ಮತ ಗಳಿಸಿದ್ದಾರೆ. ಈ ಮೂಲಕ ಯೋಗೇಶ್ವರ್ 25,413 ಮತಗಳ ಅಂತರದಿಂದ ಗೆಲುವು ದಾಖಲಿಸಿದರು. ಈ ಕ್ಷೇತ್ರದಲ್ಲಿ ಇದುವರೆಗೂ 9 ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ ಇದು ಆರನೇ ಗೆಲುವಾಗಿದೆ.
ಯೋಗೇಶ್ವರ್ ಮೊದಲ ಸುತ್ತಿನಲ್ಲಿ ಅಲ್ಪ ಮುನ್ನಡೆಯಲಿದ್ದರು. ಆದರೆ ನಂತರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದರು. ಎರಡನೇ ಸುತ್ತಿನಿಂದ ಆರನೇ ಸುತ್ತಿನವರೆಗೂ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದರು. ಆಗ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಮನೆ ಮಾಡಿತ್ತು. ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಲು ಅಣಿಯಾಗುತ್ತಿದ್ದರು.
ಆದರೆ, 7ನೇ ಸುತ್ತಿನಲ್ಲಿ ಅತ್ಯಧಿಕ ಮತಗಳನ್ನು ಗಳಿಸುವ ಮೂಲಕ ಯೋಗೇಶ್ವರ್ ಮುನ್ನಡೆಗೆ ಬಂದರು. ಅನಂತರ ಯೋಗೇಶ್ವರ್ ನಿರಂತರ ಮುನ್ನಡೆ ಕಾಯ್ದುಕೊಂಡರು. ಚನ್ನಪಟ್ಟಣ ನಗರದಲ್ಲಿ ಯೋಗೇಶ್ವರ್ ಗೆ ಹೆಚ್ಚಿನ ಮತಗಳು ದೊರೆತ ಹಿನ್ನೆಲೆಯಲ್ಲಿ ಮುನ್ನಡೆಗೆ ಬಂದರು. ಹತ್ತನೇ ಸುತ್ತಿನಲ್ಲಿ ಭಾರೀ ಮುನ್ನಡೆ ಕಾಂಗ್ರೆಸ್ಸಿಗೆ ದೊರೆಯಿತು. ಅಂತಿಮ ಸುತ್ತು ಮುಗಿಯುವವರೆಗೂ ಮುನ್ನಡೆ ಕಾಯ್ದುಕೊಂಡು ವಿಜಯದ ನಗೆ ಬೀರಿದರು.




