ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ಒಟ್ಟಾಗಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಯಿತು.ಈ ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚುನಾವಣೆ ಕುರಿತು ಮಾಹಿತಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಆದರೆ, ಈ ಬಾರಿ ಆ ರೀತಿ ಆಗಿಲ್ಲ,ಇದೂ ಸೇರಿದಂತೆ ಸೋಲಿಗೆ ಅನೇಕ ಕಾರಣಗಳಿವೆ ಎಂದರು.
ವಿಧಾನಸಭೆ ವಾತಾವರಣ ಬೇರೆ, ಲೋಕಸಭಾ ಚುನಾವಣೆ ವಾತಾವರಣವೇ ಬೇರೆ. ಚುನಾವಣಾ ಲೆಕ್ಕಾಚಾರದ ಬಗ್ಗೆ ಹೇಳುವುದಾದರೆ ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನಬೆಂಬಲ ಕೂಡ ವ್ಯಕ್ತವಾಗಿತ್ತು. ಈ ನಡುವೆ ಫಲಿತಾಂಶ ನಮಗೆ ಕೈ ಕೊಟ್ಟಿತು ಎಂದರು.
ಕಾಂಗ್ರೆಸ್ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲದಿರಬಹುದು. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸ್ವಾರ್ಥ ಬಿಟ್ಟು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ ಎಂದರು.
ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ನಡುವಿನ ವಾಕ್ಸಮರಕ್ಕೆ ಪ್ರತಿಕ್ರಿಯಿಸಿದ ಅವರು, ತಾವು ಯಾರೊಬ್ಬರ ಪರವಾಗಿ ಇಲ್ಲ, ಇಬ್ಬರ ಪರವಾಗಿಯೂ ಇದ್ದೇನೆ. ಇಬ್ಬರೂ ದೊಡ್ಡ ನಾಯಕರು, ಒಟ್ಟಿಗೆ ಕುಳಿತು ಮಾತಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಸೂಕ್ತ ಎಂದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಇದ್ದರು.




