ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರಕ್ಕಾಗಿ ಕಾರವಾರದಲ್ಲಿ 4,114 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಪ್ರಸ್ತುತ 1,400 ಕಿಲೋವ್ಯಾಟ್ ಸಾಮರ್ಥ್ಯದ 5 ಮತ್ತು 6 ನೇ ಘಟಕಗಳನ್ನು ಸ್ಥಾಪಿಸುತ್ತಿದೆ. ಈ ವಿಸ್ತರಣಾ ಯೋಜನೆಗಳಲ್ಲಿ ಸ್ಥಳೀಯರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ವಿಶೇಷ ಉದ್ಯೋಗಾವಕಾಶಗಳನ್ನು ಒದಗಿಸುವಂತೆ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ನೇತೃತ್ವದ ನಿಯೋಗ ಕೇಂದ್ರ ಅಣುಶಕ್ತಿ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ ಒತ್ತಾಯಿಸಲಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಅವರ ನೇತೃತ್ವದ ನಿಯೋಗ, ಶೀಘ್ರದಲ್ಲಿ ತಮ್ಮನ್ನು ಭೇಟಿ ಮಾಡಲು ಅನುಕೂಲವಾಗುವಂತೆ ಸಮಯವನ್ನು ನೀಡುವಂತೆ ರಾಜ್ಯಸಭಾ ಸದಸ್ಯ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೇಂದ್ರ ಅಣುಶಕ್ತಿ ಇಲಾಖೆಯ ರಾಜ್ಯ ಸಚಿವರನ್ನು ಕೋರಿದ್ದು, ತಾವೂ ಕೂಡಾ ಈ ನಿಯೋಗದೊಂದಿಗೆ ಆಗಮಿಸುವುದಾಗಿ ತಿಳಿಸಿದ್ದಾರೆ.
ಕೈಗಾ ಅಣು ವಿದ್ಯುತ್ ಸ್ಥಾವರಕ್ಕಾಗಿ ಸ್ಥಳೀಯ ಜನತೆ ತಮ್ಮ ಕೃಷಿ ಭೂಮಿ ಸೇರಿದಂತೆ ಮನೆ ಆಸ್ತಿಪಾಸ್ತಿಗಳನ್ನು ಬಿಟ್ಟುಕೊಟ್ಟು ಸಂತ್ರಸ್ಥರಾಗಿದ್ದು, ಇವರಿಗೆ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸೂಕ್ತ ಉದ್ಯೋಗವಕಾಶಗಳನ್ನು ನೀಡುವುದರ ಮೂಲಕ ಅವರ ನೆಮ್ಮದಿಯ ಬದುಕಿಗೆ ನೆರವಾಗಬೇಕು ಎಂದು ಕೇಂದ್ರ ಅಣುಶಕ್ತಿ ಇಲಾಖೆಯ ರಾಜ್ಯ ಸಚಿವರನ್ನು ಒತ್ತಾಯ ಮಾಡುವುದರ ಜೊತೆಗೆ ಸಂತ್ರಸ್ಥರಿಗೆ ಕೈಗಾದಲ್ಲಿ ಉದ್ಯೋಗ ದೊರಕಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಸತೀಶ್ ಸೈಲ್ ಹೇಳಿದ್ದಾರೆ.




