ದೆಹಲಿ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

5 years ago

ದೆಹಲಿ: ದೆಹಲಿಯ ಕ್ಯಾಂಟ್ ಪ್ರದೇಶದಲ್ಲಿ 9 ವರ್ಷದ ದಲಿತ ಬಾಲಕಿಯನ್ನು  ಅತ್ಯಾಚಾರಗೈದು ಬಳಿಕ ಸುಟ್ಟುಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೌನವಹಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದ.

ಈ ಕೃತ್ಯದ ನಿರ್ವಹಣೆಯ ವೈಫಲ್ಯ ಖಂಡಿಸಿ, ಭಾರತೀಯ ಯುವ ಕಾಂಗ್ರೆಸ್ ಉಸ್ತುವಾರಿ ಕೃಷ್ಣ ಅಲ್ಲವಾರು, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಜಂತರ್ ಮಂತರ್ ಕಡೆಗೆ  ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.

ಈ ಘಟನೆಯನ್ನು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲಿ ಕ್ಯಾಂಡಲ್ ಉರಿಸಿ ಮೌನ ಪ್ರತಿಭಟನೆ ನಡೆಸಿದರು. ಬೆಂಗಳೂರು ಉತ್ತರ ಕಾಂಗ್ರೆಸ್ ಯಲಹಂಕ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ವೈ.ಆರ್.ರವಿ, ಯಲಹಂಕ ಬ್ಲಾಕ್ ಉಪಾಧ್ಯಕ್ಷ ಅಭಿಷೇಕ್.ಬಿ.ಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

Leave a Reply