ಖಾಸಗಿ ಸಹಭಾಗಿತ್ವ ಸ್ಲಂ ಪ್ರದೇಶದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ
ಬೆಂಗಳೂರು: ರಾಜ್ಯದಲ್ಲಿ 2800ಕ್ಕೂ ಹೆಚ್ಚು ಸ್ಲಂ ಪ್ರದೇಶವಿದೆ. ಬೆಂಗಳೂರು ನಗರದಲ್ಲಿ 450ಕ್ಕೂ ಹೆಚ್ಚು ಸ್ಲಂ ಪ್ರದೇಶವಿದೆ. ರಾಜ್ಯದಲ್ಲಿರುವ ಸ್ಲಂ ನಿವಾಸಿಗಳಿಗೆ 6 ತಿಂಗಳ ಒಳಗೆ ಹಕ್ಕುಪತ್ರ ನೀಡಲಾಗುವುದು. ನಿಮ್ಹಾನ್ಸ್ ಒಳಗಿನ ಪ್ರದೇಶ ಕೊಳಗೇರಿ ಅಭಿವೃದ್ದಿ ಮಂಡಳಿಗೆ ನೀಡಿದರೆ ಹಕ್ಕುಪತ್ರ ನೀಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕೊಳಗೇರಿ ಅಭಿವೃದ್ದಿ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೊಳಗೇರಿ ಅಭಿವೃದ್ದಿ ಮಂಡಳಿ ನಿವೃತ್ತರಾದ ಬಾಲರಾಜ್ ರವರನ್ನು ಮುಖ್ಯ ತಾಂತ್ರಿಕ ಸಲಹೆಗಾರರಾಗಿ ನೇಮಿಸಲಾಗಿದೆ. ಮುಂದಿನ ತಿಂಗಳು ಕೊಳಗೇರಿ ನಿವಾಸಿಗಳಿಗೆ ಸಾವಿರಾರು ಮನೆಗಳನ್ನು ನೀಡಲಾಗುವುದು ಎಂದರು.
ಕಪ್ಪು ಪಟ್ಟಿಯಲ್ಲಿ ಗುತ್ತಿಗೆದಾರರಿಗೆ ಯಾವುದೇ ಗುತ್ತಿಗೆ ಕೆಲಸ ನೀಡುವುದಿಲ್ಲ. ಸ್ಲಂ ಪ್ರದೇಶದ ಜಾಗದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಬಹುಮಹಡಿ ಕಟ್ಟಡ ಕಟ್ಟಿ ನಿವಾಸಿಗಳಿಗೆ ನೀಡುವ ಯೋಜನೆ ಕುರಿತು ಸರ್ಕಾರ ಚಿಂತನೆ ಮಾಡುತ್ತಿದೆ ಎಂದರು.
ಸಾದರಮಂಗಲ ಒಂದು ಎಕರೆ ಪ್ರದೇಶ ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಎಂಬ ದೂರು ಬಂದಿದೆ. ಒಂದು ವಾರದಲ್ಲಿ ಸರ್ವೇ ಮಾಡಿ, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅರ್ಹ ಫಲಾನುಭವಿಗಳಿಗೆ ಮನೆ ನೀಡಲಾಗುವುದು. ಸ್ಲಂ ಬಹುಮಹಡಿ ಕಟ್ಟಡದಲ್ಲಿ ಅನಧಿಕೃತವಾಗಿ ವಾಸಿಸುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸ್ಲಂ ಜನರ ಜೀವನ ಹೇಗೆ ಎಂಬುದು ನಾನು ಕಣ್ಣಾರೆ ನೋಡಿದ್ದೇನೆ. ನನ್ನ ಅಧಿಕಾರದ ಅವಧಿಯಲ್ಲಿ ಅವರ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕೊಳಗೇರಿ ಅಭಿವೃದ್ದಿಗೆ ಸರ್ಕಾರ 50 ಕೋಟಿ ಕೊಡುತ್ತಿದೆ. ಸ್ಲಂ ಪ್ರದೇಶಗಳ ಅಭಿವೃದ್ದಿ ಪಡಿಸಲು ಕಷ್ಟ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ 500 ಕೋಟಿ ಅನುದಾನ ನೀಡಿ ಎಂದು ಮನವಿ ಸಲ್ಲಿಸಲಾಗಿದೆ ಹಾಗೂ ಕೇಂದ್ರ ಸರ್ಕಾರಕ್ಕೆ 3600 ಕೋಟಿ ರೂಪಾಯಿ ಅನುದಾನ ಕೊಡಿ ಎಂದು ಮನವಿ ಮಾಡಲಾಗಿದೆ ಎಂದರು.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಸ್ಲಂ ಪ್ರದೇಶವನ್ನು ಕೊಳಗೇರಿ ಪ್ರದೇಶ ಎಂದು ನಿರ್ಧಾರ ಮಾಡಿ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ ಎಂದರು.
ಭೀಮ ಸಂಘಟನೆಗಳ ಒಕ್ಕೂಟ ಕೆ.ಮರಿಯಪ್ಪ ಮತ್ತು ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕನ್ನಳ್ಳಿ ಕೃಷ್ಣಪ್ಪ, ದಲಿತ ಸಮುದಾಯದ ಮುಖಂಡ ಮುನಿಮಾರಪ್ಪ ಮತ್ತು ನೂರಾರು ಸ್ಲಂ ನಿವಾಸಿಗಳು ಮೂಲಭೂತ ಸೌಲಭ್ಯ, ಹಕ್ಕುಪತ್ರ ಹಾಗೂ ಕಾವೇರಿ ಕುಡಿಯುವ ನೀರಿನ ಸೌಲಭ್ಯ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.
ಕೊಳಗೇರಿ ಅಭಿವೃದ್ದಿ ಮಂಡಳಿ ಆಯುಕ್ತರು, ಬಿಬಿಎಂಪಿ, ಜಲಮಂಡಳಿ ಮತ್ತು ಕೊಳಗೇರಿ ಅಭಿವೃದ್ದಿ ಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.




