ಚಲನಚಿತ್ರ ರಾಜ್ಯ ಪ್ರಶಸ್ತಿ ಕಾರ್ಯಕ್ರಮ ನಡೆಸಲು ಒತ್ತಾಯಿಸಿ ಪ್ರತಿಭಟನೆ
ಬೆಂಗಳೂರು: ಫೀಡಂ ಪಾರ್ಕ್ ಆವರಣದಲ್ಲಿ ಕನ್ನಡ ಚಲನಚಿತ್ರಗಳಿಗೆ ಸಬ್ಸಿಡಿ ಮತ್ತು ರಾಜ್ಯ ಪ್ರಶಸ್ತಿಗಳ ವಿಳಂಬ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯಲು ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟ ರಾಜ್ಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟಟನೆಯಲ್ಲಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟ ರಾಜ್ಯ ಸಂಚಾಲಕಿ, ನಿರ್ದೇಶಕಿ ರೂಪ ಅಯ್ಯರ್ ಮತ್ತು ಚಲನಚಿತ್ರ ಕಲಾವಿದರು ಪಾಲ್ಗೊಂಡಿದ್ದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇದೇ ಸಂದರ್ಭದಲ್ಲಿ ಮಾತನಾಡಿದ ರೂಪ ಅಯ್ಯರ್, ಕನ್ನಡ ಭಾಷೆ ಉಳಿಸಿ, ಬೆಳೆಸಲು ಕನ್ನಡ ಚಲನಚಿತ್ರಗಳು ಅತ್ಯಂತ ಸಹಕಾರಿಯಾಗಿವೆ. ಪ್ರತಿವರ್ಷ ರಾಜ್ಯದಲ್ಲಿ 125ಕ್ಕೂ ಹೆಚ್ಚು ಕನ್ನಡ ಭಾಷೆಯ ಚಲನಚಿತ್ರಗಳು ತಯಾರುಗುತ್ತವೆ. ಕನ್ನಡ ಚಲನಚಿತ್ರಗಳಿಗೆ ರಾಜ್ಯ ಸರ್ಕಾರ 10 ಲಕ್ಷ ರೂಪಾಯಿ ಸಬ್ಸಿಡಿ ಹಣ ನೀಡುತ್ತದೆ. ಕಳೆದ 5 ವರ್ಷಗಳಿಂದ ಸಬ್ಸಿಡಿ ಹಣ ಬಿಡುಗಡೆಯಾಗಿಲ್ಲ. ಇದರಿಂದ ಚಲನಚಿತ್ರ ನಿರ್ಮಾಪಕರು, ನಿರ್ದೇಶಕರು, ಕಲಾವಿದರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಸಬ್ಸಿಡಿ ಹಣ ಬಿಡುಗಡೆ ಮಾಡಬೇಕು. ಇದರಿಂದ ಕನ್ನಡ ಚಲನಚಿತ್ರ ರಂಗ ಉಳಿಯುತ್ತದೆ. ಪ್ರತಿವರ್ಷ ಕನ್ನಡ ಚಲನಚಿತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿರುವ ಕಲಾವಿದರು, ತಂತ್ರಜ್ಞರು, ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡುತ್ತಿತ್ತು. ಆದರೆ ಹಲವು ವರ್ಷಗಳಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುತ್ತಿಲ್ಲ ಎಂದು ದೂರಿದರು.
ರಾಜ್ಯ ಸರ್ಕಾರ ಕನ್ನಡ ಚಲನಚಿತ್ರ ರಂಗದ ಬಗ್ಗೆ ತಾತ್ಸರ ಮನೋಭಾವನೆ ಬಿಟ್ಟು, ಕೂಡಲೆ ಸಬ್ಸಿಡಿ ಹಣ ಬಿಡುಗಡೆ ಮಾಡಿ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿ ಕನ್ನಡ ಚಲನಚಿತ್ರರಂಗಕ್ಕೆ ಪ್ರೋತ್ಸಾಹ, ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.




